ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ 


ಪಿ ಎಂ ಎನ್ ಆರ್ ಎಫ್ ನಿಂದ ಪರಿಹಾರ ಪ್ರಕಟಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 18 JUL 2026 7:13PM by PIB Bengaluru

ಗುಜರಾತ್ ನ ಅಹಮದಾಬಾದ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಎಲ್ಲ ಸಾಧ್ಯ ನೆರವನ್ನು ಒದಗಿಸುತ್ತಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.  

ಶ್ರೀ ಮೋದಿ ಅವರು, ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್‌ ಆರ್‌ ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

ಗುಜರಾತ್ ನ ಅಹಮದಾಬಾದ್ ನಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಈ ಶೋಕದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ.

ಮೃತರ ವಾರಸುದಾರರಿಗೆ ಪಿ ಎಂ ಎನ್‌ ಆರ್‌ ಎಫ್ ನಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು : ಪ್ರಧಾನಮಂತ್ರಿ @narendramodi

 

*****


(ಪ್ರಕಟಣೆ ಐ.ಡಿ.: 2286472) ವಿಸಿಟರ್ ಕೌಂಟರ್ : 45