ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚಂದ್ರಶೇಖರ್ ಆಜಾದ್ ಅವರ ಜನ್ಮ ಜಯಂತಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 23 JUL 2026 8:22AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಚಂದ್ರಶೇಖರ್ ಆಜಾದ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಚಂದ್ರಶೇಖರ್ ಆಜಾದ್ ಅವರ ನಿರ್ಭೀತ ಧೈರ್ಯ ಮತ್ತು ಅಚಲ ದೇಶಭಕ್ತಿಯು ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಹೆಮ್ಮೆಯ ಸ್ಥಾನವನ್ನು ಪಡೆದುಕೊಂಡಿದೆ ಎಂದು ಅವರು ತಿಳಿಸಿದರು.

ಚಂದ್ರಶೇಖರ್ ಆಜಾದ್ ಅವರು ಅಸಂಖ್ಯಾತ ಯುವ ಭಾರತೀಯರನ್ನು ರಾಷ್ಟ್ರದುಡಿಮೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಳ್ಳಲು ಪ್ರೇರೇಪಿಸಿದರು ಎಂದು ಶ್ರೀ ಮೋದಿಯವರು ಹೇಳಿದರು, ಅವರ ಸಂಕಲ್ಪವು ಎಲ್ಲಾ ಪೀಳಿಗೆಯವರಿಗೆ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.

ಪ್ರಧಾನ ಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ಧೈರ್ಯವಂತರಾದ ಚಂದ್ರಶೇಖರ್ ಆಜಾದ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನಗಳು. ಅವರ ನಿರ್ಭೀತ ಧೈರ್ಯ ಮತ್ತು ಅಚಲ ದೇಶಭಕ್ತಿ ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಹೆಮ್ಮೆಯ ಸ್ಥಾನವನ್ನು ಪಡೆದುಕೊಂಡಿದೆ. ಅವರು ಅಸಂಖ್ಯಾತ ಯುವ ಭಾರತೀಯರನ್ನು ರಾಷ್ಟ್ರಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಳ್ಳುವಂತೆ ಪ್ರೇರೇಪಿಸಿದ್ದಾರೆ. ಅವರ ಸಂಕಲ್ಪವು ಎಲ್ಲಾ ಪೀಳಿಗೆಯವರಿಗೆ ಸ್ಫೂರ್ತಿದಾಯಕವಾಗಿದೆ."

 

*****


(रिलीज़ आईडी: 2288348) आगंतुक पटल : 8
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Bengali-TR , Assamese , Manipuri , Punjabi , Gujarati , Odia , Tamil , Telugu , Malayalam