ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ)
azadi ka amrit mahotsav

ಕರ್ನಾಟಕ ಮತ್ತು ಆಂಧ್ರಪ್ರದೇಶದಾದ್ಯಂತ ಮೂರು ಜಿಲ್ಲೆಗಳನ್ನು ಒಳಗೊಂಡಂತೆ ಒಂದು ಬಹು-ಟ್ರ್ಯಾಕಿಂಗ್ ಯೋಜನೆಗೆ ಸಂಪುಟ ಅನುಮೋದನೆ, ಭಾರತೀಯ ರೈಲ್ವೆಯ ಪ್ರಸ್ತುತ ಜಾಲ ಸುಮಾರು 46 ಕಿ.ಮೀ.ಗಳಷ್ಟು ವಿಸ್ತರಣೆ


ಯೋಜನೆಯ ಒಟ್ಟು ಅಂದಾಜು ವೆಚ್ಚ ₹1,264 ಕೋಟಿ ಹಾಗೂ ಇದು 2028-29 ರ ವೇಳೆಗೆ ಪೂರ್ಣಗೊಳ್ಳಲಿದೆ

प्रविष्टि तिथि: 24 JUL 2026 4:05PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿರುವ ಬಳ್ಳಾರಿ - ಗುಂತಕಲ್ ವಿಭಾಗದ 3 ನೇ ಮತ್ತು 4 ನೇ ರೈಲು ಮಾರ್ಗಕ್ಕೆ ಸುಮಾರು ₹1,264 ಕೋಟಿ ಒಟ್ಟು ವೆಚ್ಚದಲ್ಲಿ ಅನುಮೋದನೆ ನೀಡಿದೆ.

ಸಂಯೋಜಿತ ಯೋಜನೆ ಮತ್ತು ಪಾಲುದಾರರ ಸಮಾಲೋಚನೆಗಳ ಮೂಲಕ ಬಹು-ಮಾದರಿ ಸಂಪರ್ಕ ಮತ್ತು ಲಾಜಿಸ್ಟಿಕ್ ದಕ್ಷತೆಯನ್ನು ಹೆಚ್ಚಿಸುವತ್ತ ಗಮನಹರಿಸಿ ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಬೃಹತ್ ಯೋಜನೆಯಡಿ  ಈ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯು ಜನರು, ಉತ್ಪನ್ನಗಳು ಮತ್ತು ಸೇವೆಗಳ ಸುಗಮ ಸಂಚಾರಕ್ಕೆ ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ.

ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳಾದ್ಯಂತ 03 ಜಿಲ್ಲೆಗಳನ್ನು ಒಳಗೊಂಡಿರುವ ಈ ಯೋಜನೆಯು ಭಾರತೀಯ ರೈಲ್ವೆಯ ಪ್ರಸ್ತುತ ಜಾಲವನ್ನು ಸುಮಾರು 46 ಕಿ.ಮೀ.ಗಳಷ್ಟು ಹೆಚ್ಚಿಸಲಿದೆ.

ಪ್ರಸ್ತಾಪಿತ ಬಹು-ಟ್ರ್ಯಾಕಿಂಗ್ ಯೋಜನೆಯು ಸುಮಾರು ಏಳು ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಸುಮಾರು 99 ಹಳ್ಳಿಗಳಿಗೆ ಸಂಪರ್ಕವನ್ನು ಹೆಚ್ಚಿಸಲಿದೆ.

ಈ ಸಾಮರ್ಥ್ಯ ವರ್ಧನೆಯು ಬಳ್ಳಾರಿ ಕೋಟೆ, ಶ್ರೀ ಕುಮಾರಸ್ವಾಮಿ ದೇವಾಲಯ ಮುಂತಾದ ದೇಶಾದ್ಯಂತ ಇರುವ ಹಲವಾರು ಪ್ರಮುಖ ಪ್ರವಾಸಿ ತಾಣಗಳಿಗೆ ರೈಲು ಸಂಪರ್ಕವನ್ನು ಸುಧಾರಿಸುತ್ತದೆ.

ಕಬ್ಬಿಣದ ಅದಿರು, ಡೋಲೋಮೈಟ್, ಸುಣ್ಣದಕಲ್ಲು, ಕಬ್ಬಿನ ಮತ್ತು ಉಕ್ಕು, ಕಲ್ಲಿದ್ದಲು, ರಸಗೊಬ್ಬರಗಳು, ಆಹಾರ ಧಾನ್ಯಗಳು ಇತ್ಯಾದಿ ಸರಕುಗಳ ಸಾಗಣೆಗೆ ಪ್ರಸ್ತಾಪಿತ ಯೋಜನೆಯು ಅತ್ಯಗತ್ಯ ಮಾರ್ಗವಾಗಿದೆ. ಸಾಮರ್ಥ್ಯ ಹೆಚ್ಚಳದ ಕೆಲಸಗಳು ವಾರ್ಷಿಕ 16.22 ಎಂಟಿಪಿಎ (ವರ್ಷಕ್ಕೆ ಮಿಲಿಯನ್ ಟನ್‌ಗಳು) ಹೆಚ್ಚುವರಿ ಸರಕು ಸಾಗಣೆಗೆ ಕಾರಣವಾಗುತ್ತವೆ. ರೈಲ್ವೆಯು ಪರಿಸರ ಸ್ನೇಹಿ ಮತ್ತು ಇಂಧನ ದಕ್ಷತೆಯ ಸಾರಿಗೆ ಮಾದರಿಯಾಗಿದ್ದು, ಹವಾಮಾನ ಗುರಿಗಳನ್ನು ಸಾಧಿಸಲು ಮತ್ತು ದೇಶದ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದನ್ನು ಕಡಿಮೆ ಮಾಡಲು (1.32 ಕೋಟಿ ಲೀಟರ್) ಮತ್ತು ಕಾರ್ಬನ್ ಹೊರಸೂಸುವಿಕೆಯನ್ನು (6.67 ಕೋಟಿ ಕೆಜಿ CO2) ತಗ್ಗಿಸಲು ಸಹಾಯ ಮಾಡುತ್ತದೆ, ಇದು 0.27 ಕೋಟಿ ಮರಗಳನ್ನು ನೆಡುವುದಕ್ಕೆ ಸಮಾನವಾಗಿದೆ.

ಹೆಚ್ಚಿದ ಮಾರ್ಗದ ಸಾಮರ್ಥ್ಯವು, ಚಲನಶೀಲತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ, ಇದು ಭಾರತೀಯ ರೈಲ್ವೆಯ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆಯನ್ನು ಸುಧಾರಿಸುತ್ತದೆ. ಈ ಬಹು-ಟ್ರ್ಯಾಕಿಂಗ್ ಪ್ರಸ್ತಾಪವು ಕಾರ್ಯಾಚರಣೆಗಳನ್ನು ಸುಗಮಗೊಳಿಸಲು ಮತ್ತು ದಟ್ಟಣೆಯನ್ನು ನಿವಾರಿಸಲು ಸಜ್ಜಾಗಿದೆ. ಈ ಯೋಜನೆಯು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ 'ನವ ಭಾರತ'ದ ದೂರದೃಷ್ಟಿಗೆ ಅನುಗುಣವಾಗಿದ್ದು, ಈ ಪ್ರದೇಶದಲ್ಲಿ ಉದ್ಯೋಗ/ಸ್ವಯಂ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಸಮಗ್ರ ಅಭಿವೃದ್ಧಿಯ ಮೂಲಕ ಈ ಭಾಗದ ಜನರನ್ನು "ಆತ್ಮನಿರ್ಭರ"ರನ್ನಾಗಿ ಮಾಡುತ್ತದೆ.

 
*****


(रिलीज़ आईडी: 2288884) आगंतुक पटल : 38
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam