ಶಿಕ್ಷಣ ಸಚಿವಾಲಯ
ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರ ಸ್ವೀಕರಿಸಿದ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ
ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಶ್ರೀ ಜೋಶಿ
प्रविष्टि तिथि:
26 JUL 2026 2:00PM by PIB Bengaluru
ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರು ಇಂದು ಕರ್ತವ್ಯ ಭವನದಲ್ಲಿ ಶಿಕ್ಷಣ ಸಚಿವಾಲಯದ ಅಧಿಕಾರವನ್ನು ಅಧಿಕೃತವಾಗಿ ವಹಿಸಿಕೊಂಡರು. ಸಚಿವರು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯಗಳ ಜವಾಬ್ದಾರಿಯನ್ನೂ ಹೊಂದಿದ್ದಾರೆ.

ಶ್ರೀ ಜೋಶಿ ಅವರು ಸಚಿವಾಲಯದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಯೋಜನೆಗಳು ಮತ್ತು ಇತರ ಉಪಕ್ರಮಗಳ ಅನುಷ್ಠಾನದ ಪರಿಶೀಲನೆ ನಡೆಸಿದರು. ಈ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸಹಾಯಕ ಶಿಕ್ಷಣ ಸಚಿವರಾದ ಶ್ರೀ ಜಯಂತ್ ಚೌಧರಿ ಅವರೂ ಭಾಗವಹಿಸಿದ್ದರು.

ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಡಾ. ವಿನೀತ್ ಜೋಶಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿ ಶ್ರೀ ಟಿ. ಕೆ. ಅನಿಲ್ ಕುಮಾರ್ ಅವರು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಉಪಸ್ಥಿತರಿದ್ದರು.
*****
(रिलीज़ आईडी: 2289589)
आगंतुक पटल : 33