ಪ್ರಧಾನ ಮಂತ್ರಿಯವರ ಕಛೇರಿ
ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್ ಶಿಪ್ 2026ರಲ್ಲಿ ಐತಿಹಾಸಿಕ ಸಾಧನೆಗೆ ಪ್ರಧಾನಮಂತ್ರಿ ಶ್ಲಾಘನೆ
ಪ್ರಕಟಣಾ ದಿನಾಂಕ:
26 JUL 2026 3:28PM by PIB Bengaluru
ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್ ಶಿಪ್ 2026ರಲ್ಲಿ ಐತಿಹಾಸಿಕ ಸಾಧನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ. ಚಿನ್ನದ ಪದಕ ಜಯಿಸಿರುವ ಮತ್ತು ವಿಶ್ವ ಜೂನಿಯರ್ ಚಾಂಪಿಯನ್ ಶಿಪ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಸ್ಕ್ವಾಷ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅನಾಹತ್ ಸಿಂಗ್ ಅವರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಈ ಸಾಧನೆಯು ಯುವಜನರಲ್ಲಿ ಸ್ಕ್ವಾಷ್ ಕ್ರೀಡೆಯನ್ನು ಮತ್ತಷ್ಟು ಜನಪ್ರಿಯಗೊಳಿಸಲಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:
"ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್ ಶಿಪ್ 2026 ರಲ್ಲಿ ಐತಿಹಾಸಿಕ ಸಾಧನೆ.
ಚಿನ್ನದ ಪದಕ ಜಯಿಸಿ, ವಿಶ್ವ ಜೂನಿಯರ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಗೆದ್ದಿರುವ ಮೊದಲ ಭಾರತೀಯ ಸ್ಕ್ವಾಷ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅನಾಹತ್ ಸಿಂಗ್ ಅವರ ಬಗ್ಗೆ ಹೆಮ್ಮೆಯಿದೆ. ಈ ಸಾಧನೆಯು ಯುವಜನರಲ್ಲಿ ಸ್ಕ್ವಾಷ್ ಅನ್ನು ಮತ್ತಷ್ಟು ಜನಪ್ರಿಯಗೊಳಿಸಲಿದೆ.
@Anahat_Singh13"
*****
(ಪ್ರಕಟಣೆ ಐ.ಡಿ.: 2289655)
ವಿಸಿಟರ್ ಕೌಂಟರ್ : 78
ಪ್ರಕಟಣೆಯನ್ನು ಇದರಲ್ಲಿ ಓದಿ:
Marathi
,
Telugu
,
Assamese
,
Bengali
,
Bengali-TR
,
Manipuri
,
Odia
,
English
,
Urdu
,
हिन्दी
,
Punjabi
,
Gujarati
,
Tamil
,
Malayalam