ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

प्रविष्टि तिथि: 26 JUL 2026 9:40PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, 2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರನ್ನು ಅಭಿನಂದಿಸಿದ್ದಾರೆ.

ಮೀರಾಬಾಯಿ ಚಾನು ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡುವ ಮೂಲಕ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದರು. ಸತತ ಎರಡು ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕಗಳು ಮತ್ತು ಒಟ್ಟಾರೆ ನಾಲ್ಕನೇ ಕಾಮನ್ವೆಲ್ತ್ ಕ್ರೀಡಾಕೂಟದ ಪದಕದೊಂದಿಗೆ, ಅವರು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿ ಉಳಿದಿದ್ದಾರೆ ಎಂದು ಶ್ರೀ ಮೋದಿ ಉಲ್ಲೇಖಿಸಿದ್ದಾರೆ.

ಅವರ ಭವಿಷ್ಯದ ಪ್ರಯತ್ನಗಳಿಗೆ ಪ್ರಧಾನ ಮಂತ್ರಿಗಳು ಶುಭ ಹಾರೈಸಿದರು.

ಶ್ರೀ ನರೇಂದ್ರ ಮೋದಿ ತಮ್ಮ  X ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ.

“ಭಾರತೀಯ ವೇಟ್‌ಲಿಫ್ಟಿಂಗ್‌ನಲ್ಲಿ ಮತ್ತೊಂದು ಅದ್ಭುತ ಅಧ್ಯಾಯ!

ಪ್ರತಿಭಾನ್ವಿತ ಮೀರಾಬಾಯಿ ಚಾನು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ 48 ಕೆಜಿ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡಿ ಚಿನ್ನ ಗೆದ್ದು ಮತ್ತೊಮ್ಮೆ ತಮ್ಮ ಕೌಶಲ್ಯ ಪ್ರದರ್ಶಿಸಿದರು. ಸತತ ಎರಡು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನ ಮತ್ತು ಒಟ್ಟಾರೆ ನಾಲ್ಕನೇ ಸಿಡಬ್ಲ್ಯೂಜಿ ಪದಕದೊಂದಿಗೆ, ಅವರು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿ ಉಳಿದಿದ್ದಾರೆ. ಅವರಿಗೆ ಅಭಿನಂದನೆಗಳು! ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು. #CWG2026

@mirabai_chanu”

 

*****


(रिलीज़ आईडी: 2289790) आगंतुक पटल : 11
इस विज्ञप्ति को इन भाषाओं में पढ़ें: Malayalam , English , हिन्दी , Marathi , Assamese , Manipuri , Gujarati