ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ರಾಜಾ ಮುತ್ತುಪಾಂಡಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

प्रविष्टि तिथि: 27 JUL 2026 1:59PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿರುವುದನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ಅವರು ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ 65 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದ ರಾಜಾ ಮುತ್ತುಪಾಂಡಿ ಅವರನ್ನು ಅಭಿನಂದಿಸಿದ್ದಾರೆ.

ಅವರ ಯಶಸ್ಸು ಪ್ರತಿಯೊಬ್ಬ ಭಾರತೀಯರನ್ನು ಸಂತೋಷ ಮತ್ತು ಹೆಮ್ಮೆ ಪಡುವಂತೆ ಮಾಡಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದು, ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

”ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ!

ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ 65 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದ ರಾಜಾ ಮುತ್ತುಪಾಂಡಿ ಅವರಿಗೆ ಅಭಿನಂದನೆಗಳು. ಅವರ ಯಶಸ್ಸು ಪ್ರತಿಯೊಬ್ಬ ಭಾರತೀಯರನ್ನು ಸಂತೋಷ ಮತ್ತು ಹೆಮ್ಮೆ ಪಡುವಂತೆ ಮಾಡುತ್ತದೆ. ಅವರ ಮುಂಬರುವ ಪ್ರಯತ್ನಗಳಿಗೆ ನನ್ನ ಶುಭಾಶಯಗಳು. 

#CWG2026"

 

*****


(रिलीज़ आईडी: 2289842) आगंतुक पटल : 24
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Bengali-TR , Manipuri , Punjabi , Gujarati , Tamil , Telugu , Malayalam