ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗ್ಲಾಸ್ಗೋ ಕಾಮನ್ ವೆಲ್ತ್ ಕ್ರೀಡಾಕೂಟ 2026ರಲ್ಲಿ ವೇಟ್‌ ಲಿಫ್ಟಿಂಗ್‌ ನಲ್ಲಿ ಬೆಳ್ಳಿ ಪದಕ ಜಯಿಸಿರುವ ಜ್ಞಾನೇಶ್ವರಿ ಯಾದವ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

प्रविष्टि तिथि: 27 JUL 2026 8:17PM by PIB Bengaluru

ಗ್ಲಾಸ್ಗೋ ಕಾಮನ್ ವೆಲ್ತ್ ಕ್ರೀಡಾಕೂಟ 2026ರ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ರಜತ ಪದಕ ಜಯಿಸಿರುವ ಜ್ಞಾನೇಶ್ವರಿ ಯಾದವ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

 ಈ ಸ್ಪರ್ಧೆಯಲ್ಲಿ ಜ್ಞಾನೇಶ್ವರಿ ಅವರು ತಮ್ಮ ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದ್ದು, ಈ ಯಶಸ್ಸು ಇನ್ನಷ್ಟು ಗಮನಾರ್ಹವಾಗಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಈ ಯಶಸ್ಸು ಭಾರತದ ಯುವಜನರಿಗೆ ಪ್ರೇರಣೆಯಾಗಲಿ ಎಂದು ಆಶಿಸಿರುವ ಪ್ರಧಾನಮಂತ್ರಿಯವರು, ಜ್ಞಾನೇಶ್ವರಿ ಅವರ ಮುಂದಿನ ಕ್ರೀಡಾ ಪಯಣದಲ್ಲಿ ನಿರಂತರ ಯಶಸ್ಸಿಗೆ ಶುಭ ಹಾರೈಸಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್‌ ಪೋಸ್ಟ್‌ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:

"ಗ್ಲಾಸ್ಗೋ ಕಾಮನ್ ವೆಲ್ತ್ ಕ್ರೀಡಾಕೂಟ 2026ರಲ್ಲಿ ವೇಟ್‌ ಲಿಫ್ಟಿಂಗ್‌ ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಜ್ಞಾನೇಶ್ವರಿ ಯಾದವ್ ಅವರಿಗೆ ಅಭಿನಂದನೆಗಳು. ಈ ಸ್ಪರ್ಧೆಯಲ್ಲಿ ಅವರು ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡಿರುವುದರಿಂದ ಈ ಯಶಸ್ಸು ಇನ್ನಷ್ಟು ಗಮನಾರ್ಹವಾಗಿದೆ. ಅವರ ಯಶಸ್ಸು ಭಾರತದ ಯುವ ಸಮುದಾಯಕ್ಕೆ ಪ್ರೇರಣೆ ನೀಡಲಿ. ಅವರು ತಮ್ಮ ಮುಂದಿನ ಪಯಣದಲ್ಲಿ ನಿರಂತರ ಯಶಸ್ಸು ಸಾಧಿಸಲಿ ಎಂದು ಹಾರೈಸುತ್ತೇನೆ.

#CWG2026"

 

*****


(रिलीज़ आईडी: 2290279) आगंतुक पटल : 7
इस विज्ञप्ति को इन भाषाओं में पढ़ें: Malayalam , English , Urdu , Marathi , हिन्दी , Assamese , Bengali , Manipuri , Punjabi , Gujarati , Tamil , Telugu