ಪ್ರಧಾನ ಮಂತ್ರಿಯವರ ಕಛೇರಿ
ಥಾಣೆಯಲ್ಲಿ ಕಟ್ಟಡ ಕುಸಿತದಿಂದ ಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ
प्रविष्टि तिथि:
31 JUL 2026 1:08PM by PIB Bengaluru
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಜನರು ಮೃತಪಟ್ಟಿರುವ ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ದುರಂತದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಈ ದುಃಖದ ಸಂದರ್ಭದಲ್ಲಿ ಮೃತರ ಕುಟುಂಬಗಳೊಂದಿಗೆ ನನ್ನ ತೀವ್ರ ಸಂತಾಪಗಳನ್ನು ಸೂಚಿಸುತ್ತಿದ್ದೇನೆ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ ಮೃತಪಟ್ಟ ಪ್ರತಿಯೊಬ್ಬರ ಹತ್ತಿರದ ಕುಟುಂಬ ಸದಸ್ಯರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿ ಘೋಷಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯವು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಹೀಗೆ ತಿಳಿಸಲಾಗಿದೆ:
"ಮಹಾರಾಷ್ಟ್ರದ ಥಾಣೆಯಲ್ಲಿ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಜೀವಹಾನಿಯಾಗಿರುವ ಸುದ್ದಿ ಕೇಳಿ ದುಃಖವಾಗಿದೆ. ಈ ದುಃಖದ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತಪಟ್ಟ ಪ್ರತಿಯೊಬ್ಬರ ಹತ್ತಿರದ ಕುಟುಂಬ ಸದಸ್ಯರಿಗೆ ತಲಾ 2 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ನೀಡಲಾಗುವುದು."
*****
(रिलीज़ आईडी: 2292349)
आगंतुक पटल : 4