ಪ್ರಧಾನ ಮಂತ್ರಿಯವರ ಕಛೇರಿ
ಮುನ್ಷಿ ಪ್ರೇಮ್ ಚಂದ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ
प्रविष्टि तिथि:
31 JUL 2026 1:48PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖ್ಯಾತ ಸಾಹಿತಿ ಮುನ್ಷಿ ಪ್ರೇಮ್ ಚಂದ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಮುನ್ಷಿ ಪ್ರೇಮ್ ಚಂದ್ ಅವರು ತಮ್ಮ ಕಾಲಾತೀತ ಸಾಹಿತ್ಯ ಕೃತಿಗಳ ಮೂಲಕ ಮಾನವ ಭಾವನೆಗಳಿಗೆ ಶಕ್ತಿಯುತ ಅಭಿವ್ಯಕ್ತಿ ನೀಡಿದ್ದು, ಅದು ಇಂದಿಗೂ ಪ್ರಸ್ತುತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಅವರ ಜನ್ಮಸ್ಥಳ ಮತ್ತು ಕರ್ಮಭೂಮಿಯಾದ ಕಾಶಿಯ ಸಾಹಿತ್ಯ ಪರಂಪರೆಗೆ ಜಾಗತಿಕ ಮನ್ನಣೆ ದೊರಕಿಸಿಕೊಡುವಲ್ಲಿ ಪ್ರೇಮ್ ಚಂದ್ ಅವರ ಅಮೂಲ್ಯ ಕೊಡುಗೆಯನ್ನು ಪ್ರಧಾನಮಂತ್ರಿ ಸ್ಮರಿಸಿದ್ದಾರೆ.
ವಾಸ್ತವಿಕತೆ ಮತ್ತು ಸಾಮಾಜಿಕ ಸಮಾನತೆಯಲ್ಲಿ ಬೇರೂರಿರುವ ಮುನ್ಷಿ ಪ್ರೇಮ್ ಚಂದ್ ಅವರ ಅಮರ ಸಾಹಿತ್ಯವು ದೇಶದ ಜನರಿಗೆ ಸ್ಫೂರ್ತಿ ನೀಡುತ್ತಲೇ ಇರಲಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“महान कथाकार मुंशी प्रेमचंद जी को उनकी जन्म-जयंती पर आदरपूर्ण श्रद्धांजलि। अपनी कालजयी रचनाओं के माध्यम से उन्होंने मानवीय संवेदनाओं को ऐसी सशक्त अभिव्यक्ति दी, जो आज भी प्रासंगिक है। अपनी जन्मभूमि और कर्मभूमि काशी की साहित्यिक विरासत को विश्व पटल पर पहचान दिलाने में भी उनका अमूल्य योगदान रहा है। यथार्थ और सामाजिक समानता पर आधारित उनका अमर साहित्य देशवासियों के लिए सदैव प्रेरणा का स्रोत बना रहेगा।”
*****
(रिलीज़ आईडी: 2292425)
आगंतुक पटल : 3