ಪ್ರಧಾನ ಮಂತ್ರಿಯವರ ಕಛೇರಿ
2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
01 AUG 2026 8:48AM by PIB Bengaluru
ಗ್ಲಾಸ್ಗೊ ದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ನೀರಜ್ ಚೋಪ್ರಾ ಮತ್ತೊಮ್ಮೆ ಗಮನಾರ್ಹ ಸ್ಥಿರತೆ, ಸಂಯಮ ಮತ್ತು ಮನೋಭಾವವನ್ನು ಪ್ರದರ್ಶಿಸಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದರು.
ನೀರಜ್ ಚೋಪ್ರಾ ಅವರ ಸಾಧನೆಗಳು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತವೆ ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ತಿಳಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
"ಗ್ಲಾಸ್ಗೊದಲ್ಲಿ ನಡೆದ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರಿಗೆ ಅತ್ಯುತ್ತಮ ಬೆಳ್ಳಿ ಪದಕ ದಕ್ಕಿದೆ! ಅವರು ಮತ್ತೊಮ್ಮೆ ಗಮನಾರ್ಹ ಸ್ಥಿರತೆ, ಸಂಯಮ ಮತ್ತು ಮನೋಭಾವವನ್ನು ಪ್ರದರ್ಶಿಸಿದ್ದಾರೆ. ಅವರ ಯಶಸ್ಸು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ. ಮುಂದಿನ ಪ್ರಯತ್ನಗಳಿಗೆ ಅವರಿಗೆ ನನ್ನ ಶುಭ ಹಾರೈಕೆಗಳು.
#CWG2026
@Neeraj_chopra1"
*****
(ಪ್ರಕಟಣೆ ಐ.ಡಿ.: 2292910)
ವಿಸಿಟರ್ ಕೌಂಟರ್ : 77
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
Assamese
,
Odia
,
English
,
Urdu
,
हिन्दी
,
Marathi
,
Bengali
,
Bengali-TR
,
Manipuri
,
Punjabi
,
Gujarati
,
Tamil
,
Telugu