ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪುರುಷರ 60 ಕೆ.ಜಿ. ಬಾಕ್ಸಿಂಗ್ ನಲ್ಲಿ ಚಿನ್ನದ ಪದಕ ಗೆದ್ದ ಸಚಿನ್ ಸಿವಾಚ್ ಗೆ ಪ್ರಧಾನಮಂತ್ರಿ ಅಭಿನಂದನೆ

प्रविष्टि तिथि: 02 AUG 2026 1:00AM by PIB Bengaluru

ಗ್ಲಾಸ್ಗೊದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟ 2026 ರ ಪುರುಷರ 60 ಕೆ.ಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಸಚಿನ್ ಸಿವಾಚ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಸಚಿನ್ ಸಿವಾಚ್ ಅವರ ಸಾಧನೆ ಹಲವು ಯುವ ಬಾಕ್ಸರ್ ಗಳಿಗೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

ಶ್ರೀ ನರೇಂದ್ರ ಮೋದಿ ಅವರು ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು ಮತ್ತು ಅವರು ಭಾರತವನ್ನು ಹೆಮ್ಮೆಪಡುವಂತೆ ಮಾಡುವುದನ್ನು ಮುಂದುವರಿಸುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

"ಗ್ಲಾಸ್ಗೊದಲ್ಲಿ ಸಚಿನ್ ಸಿವಾಚ್ ಚಿನ್ನ ಗೆದ್ದಿದ್ದಾರೆ!

ಪುರುಷರ 60 ಕೆ.ಜಿ ಬಾಕ್ಸಿಂಗ್ ಸ್ಪರ್ಧೆಯ ಯಶಸ್ಸಿಗಾಗಿ ಅವರಿಗೆ ಅಭಿನಂದನೆಗಳು. ಅವರು ಹಲವಾರು ಯುವ ಬಾಕ್ಸರ್ ಗಳಿಗೆ ಸ್ಫೂರ್ತಿ ನೀಡಲಿದ್ದಾರೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು. ಅವರು ಯಾವಾಗಲೂ ಭಾರತವನ್ನು ಹೆಮ್ಮೆಪಡುವಂತೆ ಮಾಡಲಿ.

#CWG2026"

 

*****


(रिलीज़ आईडी: 2293294) आगंतुक पटल : 3
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Assamese , Manipuri , Gujarati , Telugu , Malayalam