ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪುರುಷರ 5000 ಮೀಟರ್ ಓಟದಲ್ಲಿ ಕಂಚಿನ ಪದಕ ಗೆದ್ದ ಗುಲ್ವೀರ್ ಸಿಂಗ್ ಗೆ ಪ್ರಧಾನಮಂತ್ರಿ ಅಭಿನಂದನೆ

प्रविष्टि तिथि: 02 AUG 2026 12:03PM by PIB Bengaluru

ಗ್ಲಾಸ್ಗೊದಲ್ಲಿ ನಡೆದ 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ 5000 ಮೀ. ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಗುಲ್ವೀರ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಗಮನಾರ್ಹ ಪ್ರದರ್ಶನದೊಂದಿಗೆ ಗುಲ್ವೀರ್ ಸಿಂಗ್ ಒಂದೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಎರಡು ಅಥ್ಲೆಟಿಕ್ಸ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಪ್ರಧಾನಿ ಹೇಳಿದರು. ಗುಲ್ವೀರ್ ಸಿಂಗ್ ಅವರು ಕಾಮನ್ ವೆಲ್ತ್ ಕ್ರೀಡಾಕೂಟದ ಪುರುಷರ 5000 ಮೀಟರ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಅವರು ಹೇಳಿದರು.

ಈ ಸಾಧನೆಯನ್ನು ಭಾರತೀಯ ಅಥ್ಲೆಟಿಕ್ಸ್ ಗೆ ಒಂದು ಹೆಗ್ಗುರುತಿನ ಕ್ಷಣ ಎಂದು ಬಣ್ಣಿಸಿದ ಶ್ರೀ ನರೇಂದ್ರ ಮೋದಿ ಅವರು ಗುಲ್ವೀರ್ ಸಿಂಗ್ ಅವರಿಗೆ ಶುಭ ಹಾರೈಸಿದರು.

ಎಕ್ಸ್ ಖಾತೆಯಲ್ಲಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಹೇಳಿದ್ದಾರೆ;

"ಗುಲ್ವೀರ್ ಸಿಂಗ್ ನಿರ್ಮಿಸಿದ ಇತಿಹಾಸ! ಅವರು 2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ 5000 ಮೀ. ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಈ ಗಮನಾರ್ಹ ಪ್ರದರ್ಶನದೊಂದಿಗೆ, ಅವರು ಒಂದೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಎರಡು ಅಥ್ಲೆಟಿಕ್ಸ್ ಪದಕಗಳನ್ನು ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಪುರುಷರ 5000 ಮೀ. ಸ್ಪರ್ಧೆಯಲ್ಲಿ ಕಾಮನ್ ವೆಲ್ತ್ ಗೇಮ್ಸ್ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದು ನಿಜಕ್ಕೂ ಭಾರತೀಯ ಅಥ್ಲೆಟಿಕ್ಸ್ ಗೆ ಒಂದು ಹೆಗ್ಗುರುತಿನ ಸಾಧನೆಯಾಗಿದೆ. ಅವರಿಗೆ ನನ್ನ ಶುಭ ಹಾರೈಕೆಗಳು.

#CWG2026"

 

*****


(रिलीज़ आईडी: 2293303) आगंतुक पटल : 7
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Gujarati , Tamil , Telugu , Malayalam