ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 54 ಕೆಜಿ ಬಾಕ್ಸಿಂಗ್‌ ನಲ್ಲಿ ಚಿನ್ನದ ಪದಕ ಜಯಿಸಿರುವ ಪ್ರೀತಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

प्रविष्टि तिथि: 02 AUG 2026 12:43AM by PIB Bengaluru

ಕಾಮನ್ ವೆಲ್ತ್ ಕ್ರೀಡಾಕೂಟ 2026 ರಲ್ಲಿ ಮಹಿಳೆಯರ 54 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿರುವ ಪ್ರೀತಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರೀತಿ ಅವರು ನಿರಂತರವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಶ್ರೀ ಮೋದಿ ಅವರು ಪ್ರೀತಿ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ ಮತ್ತು ಮುಂಬರುವ ವರ್ಷಗಳಲ್ಲಿ ನಿರಂತರ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ: 

“ಮಹಿಳಾ ಬಾಕ್ಸಿಂಗ್‌ 54 ಕೆಜಿ ವಿಭಾಗದಲ್ಲಿ ಪ್ರೀತಿ ಅವರು ಅಮೋಘ ಪ್ರದರ್ಶನ ನೀಡಿ ಚಿನ್ನ ಗೆದ್ದಿದ್ದಾರೆ. ಅವರ ಪ್ರದರ್ಶನ ಸ್ಥಿರವಾಗಿದೆ. ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಅವರಿಗೆ ನಿರಂತರ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ.

#CWG2026”

 

*****


(रिलीज़ आईडी: 2293363) आगंतुक पटल : 3
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Gujarati , Telugu , Malayalam