ಗೃಹ ವ್ಯವಹಾರಗಳ ಸಚಿವಾಲಯ
ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ನವದೆಹಲಿಯ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜ ಹಾರಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆರಂಭಿಸಲಾದ ‘ಹರ್ ಘರ್ ತಿರಂಗಾ’ ಅಭಿಯಾನವು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿರುವ ದೇಶಭಕ್ತಿ ಮತ್ತು ಹೆಮ್ಮೆಯ ಭಾವನೆಯನ್ನು ಮತ್ತಷ್ಟು ಬಲಪಡಿಸುತ್ತಿದೆ
ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಬಗ್ಗೆ ನಾವು ಹೊಂದಿರುವ ಪವಿತ್ರ ಹೆಮ್ಮೆ ಮತ್ತು ನಮ್ಮ ಏಕತೆಯ ಶಕ್ತಿಯ ಪ್ರತೀಕವಾಗಿದೆ
ಕೋಟ್ಯಂತರ ದೇಶವಾಸಿಗಳು ತ್ರಿವರ್ಣ ಧ್ವಜದೊಂದಿಗೆ ಬೆಸೆದುಕೊಂಡು ‘ಏಕ ಭಾರತ, ಶ್ರೇಷ್ಠ ಭಾರತ’ದ ಸ್ಫೂರ್ತಿಯನ್ನು ಸಶಕ್ತಗೊಳಿಸುತ್ತಿದ್ದಾರೆ
ಈ ಆಂದೋಲನದಲ್ಲಿ ಪ್ರತಿಯೊಬ್ಬ ನಾಗರಿಕರೂ ಲಕ್ಷಾಂತರ ಜನರೊಂದಿಗೆ ಒಂದಾಗಬೇಕೆಂದು ಗೃಹ ಸಚಿವರು ಮನವಿ ಮಾಡಿದರು
ಪ್ರತಿಯೊಬ್ಬ ನಾಗರಿಕರೂ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶಭಕ್ತಿಯನ್ನು ಆಚರಿಸಬೇಕು ಮತ್ತು http://harghartiranga.com ನಲ್ಲಿ ಸೆಲ್ಫಿ ಅಪ್‌ಲೋಡ್ ಮಾಡಬೇಕು
प्रविष्टि तिथि:
13 AUG 2026 5:40PM by PIB Bengaluru
ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ನವದೆಹಲಿಯ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜ ಹಾರಿಸಿದರು. ಈ ಆಂದೋಲನದಲ್ಲಿ ಲಕ್ಷಾಂತರ ಜನರೊಂದಿಗೆ ಪ್ರತಿಯೊಬ್ಬ ನಾಗರಿಕರೂ ಒಂದಾಗಬೇಕು ಹಾಗೂ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಮತ್ತು http://harghartiranga.com ನಲ್ಲಿ ಸೆಲ್ಫಿ ಅಪ್‌ಲೋಡ್ ಮಾಡುವ ಮೂಲಕ ದೇಶಭಕ್ತಿಯನ್ನು ಆಚರಿಸಬೇಕು ಎಂದು ಗೃಹ ಸಚಿವರು ಮನವಿ ಮಾಡಿದರು.
ʼಎಕ್ಸ್ʼ ಸಾಮಾಜಿಕ ಮಾಧ್ಯಮದಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಕೇಂದ್ರ ಗೃಹ ಸಚಿವರು, “ಇಂದು ನವದೆಹಲಿಯಲ್ಲಿರುವ ನನ್ನ ನಿವಾಸದಲ್ಲಿ ನಾನು #HarGharTiranga ಅಭಿಯಾನದಡಿ ತ್ರಿವರ್ಣ ಧ್ವಜವನ್ನು ಹಾರಿಸಿದೆ. ಮೋದೀಜಿ ಅವರ ನೇತೃತ್ವದಲ್ಲಿ ಆರಂಭಿಸಲಾದ ಈ ಅಭಿಯಾನವು ಇಂದು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿರುವ ದೇಶಭಕ್ತಿ ಮತ್ತು ಹೆಮ್ಮೆಯ ಭಾವನೆಯನ್ನು ಮತ್ತಷ್ಟು ಬಲಪಡಿಸುತ್ತಿದೆ. ಇಂದು ಕೋಟ್ಯಂತರ ದೇಶವಾಸಿಗಳು ತ್ರಿವರ್ಣ ಧ್ವಜದೊಂದಿಗೆ ಬೆಸೆದುಕೊಂಡು 'ಏಕ ಭಾರತ, ಶ್ರೇಷ್ಠ ಭಾರತ'ದ ಸ್ಫೂರ್ತಿಯನ್ನು ಸಶಕ್ತಗೊಳಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
ಮತ್ತೊಂದು ʼಎಕ್ಸ್ʼ ಪೋಸ್ಟ್‌ನಲ್ಲಿ ಗೃಹ ಸಚಿವರು, “ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಬಗ್ಗೆ ನಾವು ಹೊಂದಿರುವ ಪವಿತ್ರ ಹೆಮ್ಮೆ ಮತ್ತು ನಮ್ಮ ಏಕತೆಯ ಶಕ್ತಿಯ ಪ್ರತೀಕವಾಗಿದೆ. ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ #HarGharTiranga ಆಂದೋಲನದಲ್ಲಿ ನಾನೂ ಭಾಗಿಯಾದೆ. ಈ ಆಂದೋಲನದಲ್ಲಿ ಲಕ್ಷಾಂತರ ಜನರೊಂದಿಗೆ ಪ್ರತಿಯೊಬ್ಬ ನಾಗರಿಕರೂ ಒಂದಾಗಬೇಕು ಹಾಗೂ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಮತ್ತು http://harghartiranga.com ನಲ್ಲಿ ಸೆಲ್ಫಿ ಅಪ್‌ಲೋಡ್ ಮಾಡುವ ಮೂಲಕ ದೇಶಭಕ್ತಿಯನ್ನು ಆಚರಿಸಬೇಕೆಂದು ನಾನು ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.
******
(रिलीज़ आईडी: 2299176)
आगंतुक पटल : 12