ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿವರಿಸುವ ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಲೇಖನ ಹಂಚಿಕೊಂಡಿರುವ ಪ್ರಧಾನಮಂತ್ರಿ

प्रविष्टि तिथि: 15 AUG 2026 5:34PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮಾನ್ಯ ಉಪರಾಷ್ಟ್ರಪತಿ ಶ್ರೀ ಸಿ ಪಿ ರಾಧಾಕೃಷ್ಣನ್ ಅವರು ಬರೆದಿರುವ ಲೇಖನವನ್ನು ಹಂಚಿಕೊಂಡಿದ್ದಾರೆ.

ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಲೇಖನವು ದೇಶಾದ್ಯಂತದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸುತ್ತಿದೆ ಮತ್ತು ಮಾನ್ಯ ಉಪರಾಷ್ಟ್ರಪತಿಯವರ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಭೇಟಿಯನ್ನು ನೆನಪಿಸಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಈ ಅಮೃತ ಕಾಲದಲ್ಲಿ 2047 ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸಲು ಜನರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು ಹಾಗೂ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಲೇಖನ ಕರೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

"ಭಾರತ ತನ್ನ 80ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಮಾನ್ಯ @VPIndia ಶ್ರೀ @CPR_VP ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ತಮ್ಮ ಭೇಟಿಯನ್ನು ನೆನಪು ಮಾಡಿಕೊಳ್ಳುತ್ತಾ, ದೇಶಾದ್ಯಂತದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿದ್ದಾರೆ.

ಈ ಅಮೃತ ಕಾಲದಲ್ಲಿ 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸಲು ಜನರು ತಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕೆಂದು ಹಾಗೂ ರಾಷ್ಟ್ರದ ಪ್ರಗತಿ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಅವರು ಕರೆ ನೀಡಿದ್ದಾರೆ."

 

*****


(रिलीज़ आईडी: 2300229) आगंतुक पटल : 22
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Bengali-TR , Manipuri , Assamese , Punjabi , Gujarati , Odia , Tamil , Telugu , Malayalam