ಪ್ರಧಾನ ಮಂತ್ರಿಯವರ ಕಛೇರಿ
ಬಿಹಾರದ ಲಖಿಸರೈನಲ್ಲಿ ಘಟಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
17 AUG 2026 12:08PM by PIB Bengaluru
ಬಿಹಾರದ ಲಖಿಸರೈನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ದುಃಖದ ಈ ಘಳಿಗೆಯಲ್ಲಿ ಮೃತರ ಕುಟುಂಬಗಳೊಂದಿಗೆ ತಮ್ಮ ಆಲೋಚನೆಗಳು ಇರುತ್ತವೆ ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಕ್ರಿಯವಾಗಿ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದರು.
ಎಕ್ಸ್ ತಾಣದಲ್ಲಿ ಎಂದು ಪ್ರಧಾನಮಂತ್ರಿಯವರು ಈ ರೀತಿ ಬರೆದಿದ್ದಾರೆ:
"ಬಿಹಾರದ ಲಖಿಸರೈನಲ್ಲಿ ಘಟಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ಈ ದುಃಖದ ಘಳಿಗೆಯಲ್ಲಿ ಮೃತರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಪೀಡಿತರಿಗೆ ಸಹಾಯ ಮಾಡುತ್ತಿದೆ."
*****
(ಪ್ರಕಟಣೆ ಐ.ಡಿ.: 2300339)
ವಿಸಿಟರ್ ಕೌಂಟರ್ : 64
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam