ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
ಶ್ರೀ ವಾಜಪೇಯಿ ಅವರ ಅಸಾಧಾರಣ ರಾಜನೀತಿಜ್ಞತೆ ಮತ್ತು ಉತ್ತಮ ಆಡಳಿತದ ಮೇಲಿನ ನಿರಂತರ ಗಮನವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
प्रविष्टि तिथि:
16 AUG 2026 9:02AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು, ನಮ್ಮ ದೇಶದ ಸೇವೆಗೆ ತಮ್ಮ ಜೀವನವನ್ನು ಮುಡುಪಾಗಿಟ್ಟ ಗಮನಾರ್ಹ ದೂರದೃಷ್ಟಿಯುಳ್ಳ ಅಸಾಧಾರಣ ಮುತ್ಸದ್ದಿಯನ್ನು ಸ್ಮರಿಸಿದರು.
ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಮಾತುಗಳು ಮತ್ತು ಕೆಲಸಗಳು ಹಲವು ತಲೆಮಾರುಗಳಿಗೆ ಸ್ಫೂರ್ತಿ ನೀಡಿವೆ, ಅವರ ನಾಯಕತ್ವವು ದೇಶವನ್ನು ಮತ್ತಷ್ಟು ಬಲಪಡಿಸಿದೆ. ಉತ್ತಮ ಆಡಳಿತ ಮತ್ತು ಜನಕಲ್ಯಾಣದ ಮೇಲಿದ್ದ ಅವರ ಗಮನವು ಸದಾ ನಮಗೆ ಮಾರ್ಗದರ್ಶನ ನೀಡುತ್ತಿರುತ್ತದೆ ಎಂದು ಶ್ರೀ ಮೋದಿ ಹೇಳಿದರು.
ಪ್ರಧಾನಮಂತ್ರಿಯವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತೇನೆ. ಗಮನಾರ್ಹ ದೂರದೃಷ್ಟಿಯಿಂದ ಕೂಡಿದ ಅಸಾಧಾರಣ ರಾಜನೀತಿಜ್ಞರಾಗಿದ್ದ ಅವರು ತಮ್ಮ ಜೀವನವನ್ನು ದೇಶದ ಸೇವೆಗೆ ಮುಡಿಪಾಗಿಟ್ಟಿದ್ದರು. ಅವರ ಮಾತುಗಳು ಮತ್ತು ಕ್ರಿಯೆಗಳು ಹಲವು ತಲೆಮಾರುಗಳಿಗೆ ಸ್ಫೂರ್ತಿ ನೀಡಿವೆ ಹಾಗೂ ಅವರ ನಾಯಕತ್ವವು ನಮ್ಮ ದೇಶವನ್ನು ಬಲಪಡಿಸಿದೆ. ಉತ್ತಮ ಆಡಳಿತ ಮತ್ತು ಜನಕಲ್ಯಾಣದ ಮೇಲಿನ ಅವರ ಗಮನವು ಸದಾ ನಮಗೆ ಮಾರ್ಗದರ್ಶನ ನೀಡುತ್ತಿರುತ್ತದೆ.”
*****
(रिलीज़ आईडी: 2300381)
आगंतुक पटल : 4
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam