ಪ್ರಧಾನ ಮಂತ್ರಿಯವರ ಕಛೇರಿ
ಪಶ್ಚಿಮ ಬಂಗಾಳದ ಬಿರ್ಭೂಮ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
17 AUG 2026 1:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಬಿರ್ಭೂಮ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನ ಮಂತ್ರಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಅಪಘಾತದಲ್ಲಿ ಸಂತ್ರಸ್ತರಾದವರಿಗೆ ಸ್ಥಳೀಯ ಆಡಳಿತವು ಸಕ್ರಿಯವಾಗಿ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದರು.
ಪ್ರಧಾನಮಂತ್ರಿ ಕಚೇರಿ ತಮ್ಮ X ಪೋಸ್ಟ್ ನಲ್ಲಿ ಈ ಬಗ್ಗೆ ಹಂಚಿಕೊಂಡಿದೆ:
“ಪಶ್ಚಿಮ ಬಂಗಾಳದ ಬಿರ್ಭೂಮ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಬಗ್ಗೆ ಕೇಳಿ ದುಃಖವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಅಪಘಾತದಲ್ಲಿ ಸಂತ್ರಸ್ತರಾದವರಿಗೆ ಸ್ಥಳೀಯ ಆಡಳಿತವು ಸಹಾಯ ಮಾಡುತ್ತಿದೆ: ಪ್ರಧಾನಮಂತ್ರಿ @narendramodi’’
*****
(ಪ್ರಕಟಣೆ ಐ.ಡಿ.: 2300389)
ವಿಸಿಟರ್ ಕೌಂಟರ್ : 40
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Bengali
,
Bengali-TR
,
Punjabi
,
Gujarati
,
Odia
,
Tamil
,
Telugu
,
Malayalam