ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ
ಬಾಲ್ಯ ವಿವಾಹದ ಬಗ್ಗೆ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ, ಬಾಲ್ಯ ವಿವಾಹ ಮುಕ್ತ ಭಾರತದ ಸಂಕಲ್ಪ ಸಾಕಾರಗೊಳಿಸುವಂತೆ ನಾಗರಿಕರಿಗೆ ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಕರೆ
ಪ್ರಕಟಣಾ ದಿನಾಂಕ:
25 AUG 2026 1:00PM by PIB Bengaluru
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ, ಎಲ್ಲಾದರೂ ಬಾಲ್ಯ ವಿವಾಹ ನಡೆಯುತ್ತಿರುವುದು ಕಂಡುಬಂದರೆ ಅಥವಾ ಅನುಮಾನ ಬಂದರೆ ಮೌನವಾಗಿರಬಾರದು ಮತ್ತು ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ತಕ್ಷಣ ವರದಿ ಮಾಡಬೇಕು ಎಂದು ನಾಗರಿಕರನ್ನು ಒತ್ತಾಯಿಸಿದ್ದಾರೆ.
ಕೇಂದ್ರ ಸಚಿವರು ತಮ್ಮ ‘X’ ಪೋಸ್ಟ್‌ನಲ್ಲಿ, “ಬಾಲ್ಯ ವಿವಾಹವು ಕೇವಲ ಸಾಮಾಜಿಕ ಪಿಡುಗಲ್ಲ, ಬದಲಿಗೆ ಮಕ್ಕಳ ಹಕ್ಕುಗಳು, ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯಕ್ಕೆ ಗಂಭೀರ ಹೊಡೆತವಾಗಿದೆ ಎಂದು ಹೇಳಿದ್ದಾರೆ.
ನಮ್ಮ ಹೆಣ್ಣುಮಕ್ಕಳ ಕನಸುಗಳು, ಹಕ್ಕುಗಳು ಮತ್ತು ಸುರಕ್ಷಿತ ಭವಿಷ್ಯವನ್ನು ರಕ್ಷಿಸಲು ಮತ್ತು ಬಾಲ್ಯ ವಿವಾಹ ಮುಕ್ತ ಭಾರತದ ಸಂಕಲ್ಪವನ್ನು ಸಾಕಾರಗೊಳಿಸಲು ಎಲ್ಲರೂ ಒಗ್ಗೂಡಿ ಮುಂದಾಗಬೇಕೆಂದು ಕರೆ ನೀಡಿದ್ದಾರೆ.
*****
(ಪ್ರಕಟಣೆ ಐ.ಡಿ.: 2303093)
ವಿಸಿಟರ್ ಕೌಂಟರ್ : 20