ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೌಶಂಬಿಯಲ್ಲಿ ಪಟಾಕಿ ಕಾರ್ಖಾನೆ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಪ್ರಕಟ

ಪ್ರಕಟಣಾ ದಿನಾಂಕ: 31 AUG 2026 9:59PM by PIB Bengaluru

ಉತ್ತರಪ್ರದೇಶದ ಕೌಶಂಬಿಯಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಶ್ರೀ ಮೋದಿ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಶ್ರೀ ಮೋದಿ ಅವರು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ಮೃತರ ವಾರಸುದಾರರಿಗೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹50,000 ಪರಿಹಾರ ಘೋಷಿಸಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

ಉತ್ತರ ಪ್ರದೇಶದ ಕೌಶಂಬಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿರುವ ಅವಘಡದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ಶೋಕದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ.

ಮೃತರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi

 

*****


(ಪ್ರಕಟಣೆ ಐ.ಡಿ.: 2305283) ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ: English , हिन्दी , Gujarati