ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

EOS-05 ಉಪಗ್ರಹ ಹೊತ್ತ GSLV-F17 ರಾಕೆಟ್ ನ ಯಶಸ್ವಿ ಉಡಾವಣೆಗಾಗಿ ಇಸ್ರೋವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 04 SEP 2026 10:35AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೋ ಇಂದು ಮತ್ತೊಂದು ಮಹತ್ವದ ಸಾಧನೆಯನ್ನು ಮಾಡಿದೆ ಎಂದು ಶ್ಲಾಘಿಸಿದ್ದಾರೆ ಹಾಗೂ ಇದು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ.

ಜಿಯೋಸಿಂಕ್ರೋನಸ್ ಕಕ್ಷೆಯಿಂದ ಭಾರತದ ಮೊದಲ ಇಮೇಜಿಂಗ್ ಉಪಗ್ರಹವಾದ EOS-05 ಅನ್ನು ಹೊತ್ತ GSLV-F17 ನ ಯಶಸ್ವಿ ಉಡಾವಣೆಯು ಭಾರತದ ಬಾಹ್ಯಾಕಾಶ ವಲಯವನ್ನು ವ್ಯಾಖ್ಯಾನಿಸುವ ಶ್ರೇಷ್ಠತೆ, ನಾವೀನ್ಯತೆ ಮತ್ತು ಬೆಳೆಯುತ್ತಿರುವ ಸಾಮರ್ಥ್ಯಗಳ ಪ್ರತಿಬಿಂಬವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಇಸ್ರೋ ಮತ್ತು ಭಾರತೀಯ ಉದ್ಯಮದ ನಡುವೆ ಬೆಳೆಯುತ್ತಿರುವ ಪಾಲುದಾರಿಕೆಯು ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಹೊಸ ಶಕ್ತಿ ಮತ್ತು ಪ್ರಮಾಣವನ್ನು ಸೇರ್ಪಡೆ ಮಾಡಿದೆ. ಇಡೀ ಬಾಹ್ಯಾಕಾಶ ಪೂರಕ ವ್ಯವಸ್ಥೆಯಲ್ಲಿ ಭಾರತದ ಸಾಮರ್ಥ್ಯಗಳನ್ನು ವಿಸ್ತರಿಸುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ:

“ಇಸ್ರೋದಿಂದ ಮತ್ತೊಂದು ಮಹತ್ವದ ಸಾಧನೆ ಮತ್ತು ನಮ್ಮ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ.

ಜಿಯೋಸಿಂಕ್ರೋನಸ್ ಕಕ್ಷೆಯಿಂದ ಭಾರತದ ಮೊದಲ ಇಮೇಜಿಂಗ್ ಉಪಗ್ರಹವಾದ EOS-05 ಅನ್ನು ಹೊತ್ತ GSLV-F17 ನ ಯಶಸ್ವಿ ಉಡಾವಣೆಯು ಭಾರತದ ಬಾಹ್ಯಾಕಾಶ ವಲಯವನ್ನು ವ್ಯಾಖ್ಯಾನಿಸುವ ಶ್ರೇಷ್ಠತೆ, ನಾವೀನ್ಯತೆ ಮತ್ತು ಬೆಳೆಯುತ್ತಿರುವ ಸಾಮರ್ಥ್ಯಗಳ ಪ್ರತಿಬಿಂಬವಾಗಿದೆ.

ಇಸ್ರೋ ಮತ್ತು ಭಾರತೀಯ ಉದ್ಯಮದ ನಡುವಿನ ಬೆಳೆಯುತ್ತಿರುವ ಪಾಲುದಾರಿಕೆಯು ನಮ್ಮ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಹೊಸ ಶಕ್ತಿ ಮತ್ತು ಪ್ರಮಾಣವನ್ನು ಸೇರ್ಪಡೆ ಮಾಡುತ್ತಿದೆ ಮತ್ತು ಇಡೀ ಬಾಹ್ಯಾಕಾಶ ಪೂರಕ ವ್ಯವಸ್ಥೆಯಾದ್ಯಂತ ಭಾರತದ ಸಾಮರ್ಥ್ಯಗಳನ್ನು ವಿಸ್ತರಿಸುತ್ತಿದೆ.”

 

*****


(ಪ್ರಕಟಣೆ ಐ.ಡಿ.: 2306651) ವಿಸಿಟರ್ ಕೌಂಟರ್ : 9
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Assamese , Gujarati , Odia , Malayalam