ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶಿಕ್ಷಕರ ದಿನಾಚರಣೆಯಂದು ಶಿಕ್ಷಕರ ಮಹತ್ವದ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ


ಡಾ. ಎಸ್. ರಾಧಾಕೃಷ್ಣನ್ ಅವರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ

ಪ್ರಕಟಣಾ ದಿನಾಂಕ: 05 SEP 2026 10:49AM by PIB Bengaluru

ಸಮಾಜಕ್ಕೆ ಶಿಕ್ಷಕರು ನೀಡುವ ಮಹತ್ತರ ಕೊಡುಗೆಯನ್ನು ಗುರುತಿಸಿ ಪ್ರಶಂಸಿಸುವುದೇ ಶಿಕ್ಷಕರ ದಿನಾಚರಣೆಯ ಉದ್ದೇಶ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒತ್ತಿ ಹೇಳಿದರು. ಇದರೊಂದಿಗೆ, ಇದು ಡಾ. ಎಸ್. ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸುವ ದಿನವೂ ಹೌದು ಎಂದು ಅವರು ತಿಳಿಸಿದರು.

ಅಲ್ಲದೆ, ನಿನ್ನೆ 7, ಲೋಕ ಕಲ್ಯಾಣ ಮಾರ್ಗಕ್ಕೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪುರಸ್ಕೃತರನ್ನು ಆಹ್ವಾನಿಸಿದ ಸಂದರ್ಭದಲ್ಲಿ ನಡೆದ ಸಂವಾದದ ತುಣುಕುಗಳನ್ನು ಪ್ರಧಾನಮಂತ್ರಿಯವರು ಹಂಚಿಕೊಂಡಿದ್ದಾರೆ.

'ಎಕ್ಸ್' ವೇದಿಕೆಯಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ ಪ್ರಧಾನಮಂತ್ರಿಗಳು ಹೀಗೆ ತಿಳಿಸಿದ್ದಾರೆ:

"#TeachersDay ಎಂಬುದು ನಮ್ಮ ಸಮಾಜಕ್ಕೆ ಶಿಕ್ಷಕರು ನೀಡಿದ ಮಹತ್ವದ ಕೊಡುಗೆಯನ್ನು ಗೌರವಿಸುವ ಸುದಿನ. ಹಾಗೆಯೇ ಡಾ. ಎಸ್. ರಾಧಾಕೃಷ್ಣನ್ ಅವರಿಗೆ ಗೌರವ ನಮನ ಸಲ್ಲಿಸುವ ದಿನವೂ ಹೌದು.

ನಿನ್ನೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತರನ್ನು 7, ಲೋಕ ಕಲ್ಯಾಣ ಮಾರ್ಗಕ್ಕೆ ಆಹ್ವಾನಿಸಿದಾಗ ಸಾಕ್ಷಿಯಾದ ಕ್ಷಣಗಳು ಇಲ್ಲಿವೆ..."

 

*****


(ಪ್ರಕಟಣೆ ಐ.ಡಿ.: 2306902) ವಿಸಿಟರ್ ಕೌಂಟರ್ : 12
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Bengali , Assamese , Gujarati , Tamil , Malayalam