ಪ್ರಧಾನ ಮಂತ್ರಿಯವರ ಕಛೇರಿ
ನಾಂದೇಡ್‌ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿಆಗಿರುವ ಪ್ರಾಣಹಾನಿಗೆ ಪ್ರಧಾನಮಂತ್ರಿ ಸಂತಾಪ
ಪಿಎಂಎನ್‌ಆರ್‌ಎಫ್ ನಿಂದ ಪರಿಹಾರ ಧನ ಘೋಷಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
11 SEP 2026 9:11AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿಯಾಗಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ತಮ್ಮ ಸಾಂತ್ವನವನ್ನು ತಿಳಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತರ ಪ್ರತಿಯೊಬ್ಬರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) 2 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು.
ಪ್ರಧಾನಮಂತ್ರಿಯವರ ಕಚೇರಿ ತನ್ನ 'ಎಕ್ಸ್' ಪೋಸ್ಟ್‌ನಲ್ಲಿ ಹೀಗೆ ಹೇಳಿದೆ:
"ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪ್ರಾಣಹಾನಿಯಾಗಿರುವುದು ದುಃಖಕರವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಪ್ರತಿಯೊಬ್ಬರ ಕುಟುಂಬದವರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು: PM @narendramodi”
*****
(ಪ್ರಕಟಣೆ ಐ.ಡಿ.: 2309055)
ವಿಸಿಟರ್ ಕೌಂಟರ್ : 21
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Bengali-TR
,
Manipuri
,
Punjabi
,
Gujarati
,
Tamil
,
Telugu
,
Malayalam