ಪ್ರಧಾನ ಮಂತ್ರಿಯವರ ಕಛೇರಿ
ನವದೆಹಲಿಯಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಕಜಕಿಸ್ತಾನ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
13 SEP 2026 4:31PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಕಜಕಿಸ್ತಾನ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಕಾಸಿಮ್-ಜೋಮಾರ್ಟ್ ಟೊಕಾಯೆವ್ ಅವರನ್ನು ಭೇಟಿಯಾದರು.
ಪ್ರಧಾನಮಂತ್ರಿ ಮೋದಿ ಅವರು ಕಜಕಿಸ್ತಾನದೊಂದಿಗಿನ ಭಾರತದ ಪ್ರಾಚೀನ ನಾಗರಿಕ ಸಂಬಂಧಗಳನ್ನು ಸ್ಮರಿಸಿದರು ಮತ್ತು ಇತ್ತೀಚಿನ ವರ್ಷಗಳಲ್ಲಿ ಭಾರತ-ಕಜಕಿಸ್ತಾನ್ ಸಂಬಂಧಗಳ ಸ್ಥಿರ ಅಭಿವೃದ್ಧಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ರಾಜಕೀಯ, ವ್ಯಾಪಾರ, ರಕ್ಷಣೆ ಮತ್ತು ಭದ್ರತೆ, ಸಂಪರ್ಕ, ಇಂಧನ, ನಿರ್ಣಾಯಕ ಖನಿಜಗಳು, ಉದಯೋನ್ಮುಖ ತಂತ್ರಜ್ಞಾನಗಳು, ಸೃಜನಶೀಲ ಆರ್ಥಿಕತೆ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಹಕಾರವನ್ನು ಉಭಯ ನಾಯಕರು ಪರಿಶೀಲಿಸಿದರು. ಅವರು ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಬೆಳವಣಿಗೆಗಳ ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡರು.
ತಮ್ಮ ಜನರ ಪರಸ್ಪರ ಪ್ರಯೋಜನಕ್ಕಾಗಿ, ಜತೆಗೆ ಈ ಪ್ರದೇಶದಲ್ಲಿ ಶಾಂತಿ, ಸ್ಥಿರತೆ, ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಉಭಯ ದೇಶಗಳ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ನಾಯಕರು ಪುನರುಚ್ಚರಿಸಿದರು.
*****
(ಪ್ರಕಟಣೆ ಐ.ಡಿ.: 2309835)
ವಿಸಿಟರ್ ಕೌಂಟರ್ : 4