ಪ್ರಧಾನ ಮಂತ್ರಿಯವರ ಕಛೇರಿ
ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಟೆರೆಸ್ ಅವರನ್ನು ಭೇಟಿಯಾದ ಪ್ರಧಾನಮಂತ್ರಿ ಮೋದಿ
ಪ್ರಕಟಣಾ ದಿನಾಂಕ:
11 SEP 2026 9:29PM by PIB Bengaluru
ನವದೆಹಲಿಯಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗೌರವಾನ್ವಿತ ಶ್ರೀ ಆಂಟೋನಿಯೊ ಗುಟೆರೆಸ್ ಅವರನ್ನು ಭೇಟಿಯಾದರು.
ಭಾರತವು 4ನೇ ಬಾರಿಗೆ ಬ್ರಿಕ್ಸ್ ಅಧ್ಯಕ್ಷತೆ ವಹಿಸಿದ್ದಕ್ಕಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ(ಯುಎನ್‌ಎಸ್‌ಜಿ) ಗುಟೆರೆಸ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಅಭಿನಂದಿಸಿದರು. ಸಮಕಾಲೀನ ವಾಸ್ತವಗಳನ್ನು ಪ್ರತಿಬಿಂಬಿಸಲು ಬಹುಪಕ್ಷೀಯತೆಯ ಮಹತ್ವ ಮತ್ತು ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೇರಿದಂತೆ ಬಹುಪಕ್ಷೀಯ ಸಂಸ್ಥೆಗಳನ್ನು ಸುಧಾರಿಸುವ ಅಗತ್ಯಕ್ಕೆ ಇಬ್ಬರೂ ನಾಯಕರು ಒತ್ತು ನೀಡಿದರು.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷಗಳು ಮತ್ತು ಸಾಗರ ನೌಕೆಗಳ ಸಂಚಾರ ಸ್ವಾತಂತ್ರ್ಯ, ಸುಸ್ಥಿರ ಅಭಿವೃದ್ಧಿ, ಮಾನವ ಕೇಂದ್ರಿತ ಕೃತಕ ಬುದ್ಧಿಮತ್ತೆ, ನವೀಕರಿಸಬಹುದಾದ ಇಂಧನದಲ್ಲಿನ ಪ್ರಗತಿ ಮತ್ತು ಜಾಗತಿಕ ಆಹಾರ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅವರು ಚರ್ಚೆ ನಡೆಸಿದರು.
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳ ಉಳಿದ ಅಧಿಕಾರಾವಧಿಯಲ್ಲಿ ಇನ್ನೂ ಹೆಚ್ಚಿನ ಕಾರ್ಯ ಕೈಗೊಳ್ಳುವಂತೆ ಪ್ರಧಾನಮಂತ್ರಿ ಮೋದಿ ಅವರು ಗುಟೆರೆಸ್ ಅವರಿಗೆ ಶುಭ ಹಾರೈಸಿದರು.
*****
(ಪ್ರಕಟಣೆ ಐ.ಡಿ.: 2310092)
ವಿಸಿಟರ್ ಕೌಂಟರ್ : 21
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam