ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯಾ ಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 14 SEP 2026 8:45AM by PIB Bengaluru

ಏಷ್ಯಾ ಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪಂದ್ಯಾವಳಿಯುದ್ದಕ್ಕೂ ತಂಡದ ಆತ್ಮವಿಶ್ವಾಸ, ಸ್ಥಿರತೆ ಮತ್ತು ಅದ್ಭುತ ಕ್ರೀಡಾ ಸ್ಫೂರ್ತಿ ಎದ್ದು ಕಾಣುತ್ತಿತ್ತು ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಈ ಗೆಲುವು ದೇಶಾದ್ಯಂತ ಲಕ್ಷಾಂತರ ಯುವಕ-ಯುವತಿಯರಿಗೆ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಮತ್ತು ಮಿಂಚಲು ಪ್ರೇರಣೆಯಾಗಲಿ ಎಂದು ಶ್ರೀ ಮೋದಿ ಆಶಿಸಿದರು.

X ನಲ್ಲಿ ಪೋಸ್ಟ್ ಮಾಡಿರುವ ಶ್ರೀ ಮೋದಿ;

"ಭಾರತೀಯ ಕ್ರಿಕೆಟ್‌ಗೆ ಹೆಮ್ಮೆಯ ಕ್ಷಣ!

ಏಷ್ಯಾ ಕಪ್ ಗೆದ್ದ ಮಹಿಳಾ ತಂಡಕ್ಕೆ ಅಭಿನಂದನೆಗಳು. ಟೂರ್ನಿಯುದ್ದಕ್ಕೂ ಅವರ ಆತ್ಮವಿಶ್ವಾಸ, ಸ್ಥಿರತೆ ಮತ್ತು ಅದ್ಭುತ ಕ್ರೀಡಾ ಸ್ಫೂರ್ತಿ ಎದ್ದು ಕಾಣುತ್ತಿತ್ತು.

ಈ ಗೆಲುವು ದೇಶಾದ್ಯಂತ ಲಕ್ಷಾಂತರ ಯುವಕ-ಯುವತಿಯರಿಗೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಲು ಮತ್ತು ಮಿಂಚಲು ಪ್ರೇರಣೆಯಾಗಲಿ."

 

*****


(ಪ್ರಕಟಣೆ ಐ.ಡಿ.: 2310330) ವಿಸಿಟರ್ ಕೌಂಟರ್ : 10