ಪ್ರಧಾನ ಮಂತ್ರಿಯವರ ಕಛೇರಿ
20ನೇ ರೋಜ್ ಗಾರ್ ಮೇಳದ ಅಂಗವಾಗಿ, ಪ್ರಧಾನಮಂತ್ರಿ ಅವರಿಂದ ಸೆಪ್ಟೆಂಬರ್ 19 ರಂದು ಸರ್ಕಾರಕ್ಕೆ ನೂತನವಾಗಿ ಆಯ್ಕೆಯಾದ ಯುವಕರಿಗೆ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆ
ಪ್ರಕಟಣಾ ದಿನಾಂಕ:
18 SEP 2026 3:09PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 19 2026 ರಂದು ಮಧ್ಯಾಹ್ನ 12:30ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿರುವ 20ನೇ ರೋಜ್ ಗಾರ್ ಮೇಳದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಹೊಸದಾಗಿ ಆಯ್ಕೆಯಾದ ಯುವಕರಿಗೆ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹೊಸದಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ರೋಜ್ ಗಾರ್ ಮೇಳವು ದೇಶಾದ್ಯಂತ 45 ಸ್ಥಳಗಳಲ್ಲಿ ನಡೆಯಲಿದೆ. ನೂತನವಾಗಿ ನೇಮಕಗೊಂಡ ಅಭ್ಯರ್ಥಿಗಳು ಕಂದಾಯ ಇಲಾಖೆ, ರೈಲ್ವೆ ಸಚಿವಾಲಯ, ಗೃಹ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ, ರಕ್ಷಣಾ ಸಚಿವಾಲಯ ಸೇರಿದಂತೆ ಭಾರತ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೇರ್ಪಡೆಯಾಗಲಿದ್ದಾರೆ.
ರೋಜ್ ಗಾರ್ ಮೇಳವು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮತ್ತು ದೇಶದ ಅಭಿವೃದ್ಧಿ ಪಯಣದಲ್ಲಿ ಅವರ ಹೆಚ್ಚಿನ ಭಾಗವಹಿಸುವಿಕೆಯನ್ನು ಖಚಿತಪಡಿಸುವ ಸರ್ಕಾರದ ನಿರಂತರ ಆದ್ಯತೆಯನ್ನು ತೋರಿಸುತ್ತದೆ. ಈ 20ನೇ ರೋಜ್ ಗಾರ್ ಮೇಳದೊಂದಿಗೆ, ಒಟ್ಟಾರೆಯಾಗಿ ಸುಮಾರು 12.75 ಲಕ್ಷ ಯುವಕರು ವಿವಿಧ ಇಲಾಖೆಗಳು ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ನೇಮಕಾತಿ ಪತ್ರಗಳನ್ನು ಪಡೆದಂತಾಗುತ್ತದೆ.
*****
(ಪ್ರಕಟಣೆ ಐ.ಡಿ.: 2312022)
ವಿಸಿಟರ್ ಕೌಂಟರ್ : 10