ಪ್ರಧಾನ ಮಂತ್ರಿಯವರ ಕಛೇರಿ
ಯುಎಇ ಅಧ್ಯಕ್ಷರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ
ಪ್ರಧಾನಮಂತ್ರಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಯುಎಇ ಅಧ್ಯಕ್ಷರು
ಭಾರತ-ಯುಎಇ ಸಮಗ್ರ ಆಯಕಟ್ಟಿನ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಕ್ರಮಗಳ ಕುರಿತು ನಾಯಕರ ಚರ್ಚೆ
ಭಾರತದ ಯಶಸ್ವಿ ಬ್ರಿಕ್ಸ್ ಅಧ್ಯಕ್ಷತೆಗೆ ಪ್ರಧಾನಮಂತ್ರಿಯವರನ್ನು ಅಭಿನಂದಿಸಿದ ಯುಎಇ ಅಧ್ಯಕ್ಷರು
ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಉತ್ತೇಜಿಸುವ ಬದ್ಧತೆಯನ್ನು ಪುನರುಚ್ಚರಿಸಿದ ನಾಯಕರು
ಪ್ರಕಟಣಾ ದಿನಾಂಕ:
18 SEP 2026 4:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ದೂರವಾಣಿ ಕರೆ ಮಾಡಿದರು.
ಯುಎಇ ಅಧ್ಯಕ್ಷರು ಪ್ರಧಾನಮಂತ್ರಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು.
ಇಂಧನ, ರಕ್ಷಣೆ, ತಂತ್ರಜ್ಞಾನ, ಹೂಡಿಕೆ ಮತ್ತು ಆರೋಗ್ಯ ಸೇರಿದಂತೆ ಭಾರತ-ಯುಎಇ ಸಮಗ್ರ ಆಯಕಟ್ಟಿನ ಪಾಲುದಾರಿಕೆಯನ್ನು ಮತ್ತಷ್ಟು ಗೊಳಿಗೊಳಿಸುವ ಹೊಸ ಕ್ರಮಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಿದರು.
ಭಾರತದ ಯಶಸ್ವಿ ಬ್ರಿಕ್ಸ್ ಅಧ್ಯಕ್ಷತೆಗೆ ಯುಎಇ ಅಧ್ಯಕ್ಷರು ಪ್ರಧಾನಮಂತ್ರಿಯವರನ್ನು ಅಭಿನಂದಿಸಿದರು. ಬ್ರಿಕ್ಸ್ ಶೃಂಗಸಭೆಯಲ್ಲಿ ಯುವರಾಜ ಶೇಖ್ ಖಾಲೆದ್ ಅವರ ಭಾಗವಹಿಸುವಿಕೆ ಮತ್ತು ಭಾರತದ ಅಧ್ಯಕ್ಷತೆಯಡಿಯಲ್ಲಿ ಸಾರ್ಥಕ ಫಲಿತಾಂಶಗಳನ್ನು ಸಾಧಿಸುವಲ್ಲಿ ಯುಎಇ ನೀಡಿದ ಸಹಕಾರ ಮತ್ತು ಸಹಭಾಗಿತ್ವವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು.
ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದ ಬೆಳವಣಿಗೆಗಳ ಕುರಿತು ವಿಚಾರಗಳನ್ನು ವಿನಿಮಯ ಮಾಡಿಕೊಂಡರು. ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಉತ್ತೇಜಿಸುವ ಪ್ರಯತ್ನಗಳಲ್ಲಿ ನಿರಂತರ ಸಹಕಾರ ಮತ್ತು ಸಮನ್ವಯದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.
*****
(ಪ್ರಕಟಣೆ ಐ.ಡಿ.: 2312107)
ವಿಸಿಟರ್ ಕೌಂಟರ್ : 19