ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪಿ ಎಂ ಎನ್ ಆರ್ ಎಫ್ ನಿಂದ ಪರಿಹಾರ ಪ್ರಕಟಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 19 SEP 2026 4:16PM by PIB Bengaluru

ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿಗಳು ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್‌ ಆರ್‌ ಎಫ್) ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ: 

ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ಸಂಭವಿಸಿದ ದುರ್ಘಟನೆಯು ಅತ್ಯಂತ ನೋವಿನ ಸಂಗತಿ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು.

ಮೃತರ ವಾರಸುದಾರರಿಗೆ ಪಿ ಎಂ ಎನ್‌ ಆರ್‌ ಎಫ್‌ ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಧನ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುವುದು: ಪ್ರಧಾನಮಂತ್ರಿ @narendramodi

 

*****


(ಪ್ರಕಟಣೆ ಐ.ಡಿ.: 2312557) ವಿಸಿಟರ್ ಕೌಂಟರ್ : 25