ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಕ್ರೀಡಾಕೂಟದಲ್ಲಿ ಸಮ್ಮಿಶ್ರ ಸಮರ ಕಲೆಯಲ್ಲಿ ಕಂಚಿನ ಪದಕ ಗೆದ್ದ ಸುಚಿಕಾ ತರಿಯಾಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
22 SEP 2026 1:58PM by PIB Bengaluru
ಏಷ್ಯನ್ ಕ್ರೀಡಾಕೂಟದಲ್ಲಿ ಸಮ್ಮಿಶ್ರ ಸಮರ ಕಲೆಯಲ್ಲಿ ಕಂಚಿನ ಪದಕ ಗೆದ್ದ ಕು.ಸುಚಿಕಾ ತರಿಯಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ, ಇದು ಭಾರತಕ್ಕೆ ಐತಿಹಾಸಿಕ ಸಾಧನೆ ಎಂದು ಅವರು ಬಣ್ಣಿಸಿದ್ದಾರೆ.
ಈ ಕ್ಷೇತ್ರದಲ್ಲಿ ಭಾರತದ ಮೊದಲ ಏಷ್ಯನ್ ಕ್ರೀಡಾಕೂಟದ ಪದಕವನ್ನು ಅವರು ಪಡೆದುಕೊಂಡಿದ್ದಾರೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅವರ ಸಾಧನೆಯು ವಿಶೇಷವಾಗಿ ಮಹತ್ವದ್ದಾಗಿದೆ, ಅವರ ಸಮರ್ಪಣೆ ಮತ್ತು ಉತ್ಸಾಹವನ್ನು ಉಲ್ಲೇಖಿಸುತ್ತದೆ ಮತ್ತು ಮುಂದೆ ಇನ್ನೂ ಅನೇಕ ಯಶಸ್ಸಿಗೆ ಶುಭ ಹಾರೈಸುತ್ತೇನೆ ಎಂದು ಅವರು ಹೇಳಿದ್ದಾರೆ.
ಪ್ರಧಾನಮಂತ್ರಿಯವರ ಕಾರ್ಯಾಲಯ ಎಕ್ಸ್ ತಾಣದಲ್ಲಿನ ಪೋಸ್ಟ್ ನಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ:
"ಭಾರತಕ್ಕೆ ಐತಿಹಾಸಿಕ ಸಾಧನೆ!
ಸಮ್ಮಿಶ್ರ ಸಮರ ಕಲೆಗಳಲ್ಲಿ ಕಂಚಿನ ಪದಕ ಗೆದ್ದ ಮತ್ತು ಈ ಕ್ಷೇತ್ರದಲ್ಲಿ ಭಾರತಕ್ಕೆ ಮೊದಲ ಏಷ್ಯನ್ ಕ್ರೀಡಾಕೂಟದ ಪದಕವನ್ನು ನೀಡಿದ ಕು. ಸುಚಿಕಾ ತರಿಯಾಲ್ ಅವರಿಗೆ ಅಭಿನಂದನೆಗಳು. ಅವರ ಸಾಧನೆಯು ವಿಶೇಷವಾಗಿ ಮಹತ್ವದ್ದಾಗಿದೆ, ಅವರ ಸಮರ್ಪಣೆ ಮತ್ತು ಕ್ರೀಡಾ ಉತ್ಸಾಹವನ್ನು ಈ ಪದಕ ಉಲ್ಲೇಖಿಸುತ್ತದೆ.
ಮುಂದೆ ಇನ್ನೂ ಅನೇಕ ಯಶಸ್ಸುಗಳು ಸಿಗಲಿ ಎಂದು ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2313549)
ವಿಸಿಟರ್ ಕೌಂಟರ್ : 21
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Punjabi
,
Gujarati
,
Tamil
,
Telugu
,
Malayalam