ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರಿಂದ ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಅವರ ಭೇಟಿ


ಪದ್ಮವಿಭೂಷಣ ಯತಿಕುಲ ಚಕ್ರವರ್ತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಆಚರಣೆಯ ಲೋಗೋ ಪ್ರಧಾನಮಂತ್ರಿಗಳಿಂದ ಅನಾವರಣ

ಪ್ರಕಟಣಾ ದಿನಾಂಕ: 22 SEP 2026 9:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕರ್ನಾಟಕದ ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಇತರ ಗಣ್ಯರನ್ನು ಭೇಟಿಯಾದರು.

ಪದ್ಮವಿಭೂಷಣ ಯತಿಕುಲ ಚಕ್ರವರ್ತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವದ ಲೋಗೋವನ್ನು ಪ್ರಧಾನಮಂತ್ರಿ ಅನಾವರಣಗೊಳಿಸಿದರು. ಭಕ್ತಿ, ಪಾಂಡಿತ್ಯ ಮತ್ತು ಸೇವೆಯಿಂದ ಕೂಡಿದ ಅವರ ಜೀವನವು ಅಸಂಖ್ಯಾತ ಜನರಿಗೆ ಸ್ಫೂರ್ತಿ ನೀಡುತ್ತಲೇ ಇರಲಿದೆ ಎಂದು ಅವರು ಹೇಳಿದರು. ವಿಶ್ವೇಶ ತೀರ್ಥ ಸ್ವಾಮಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ವಿವಿಧ ಕಾರ್ಯಕ್ರಮಗಳು ಅವರ ಉದಾತ್ತ ಆದರ್ಶಗಳನ್ನು ಇನ್ನಷ್ಟು ಮುಂದಕ್ಕೆ ಕೊಂಡೊಯ್ಯಲಿವೆ ಎಂದು ಶ್ರೀ ಮೋದಿ ಅವರು ತಿಳಿಸಿದರು.

ಪ್ರಧಾನಮಂತ್ರಿಯವರು 'ಎಕ್ಸ್' ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:

"ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಮತ್ತು ಇತರ ಗಣ್ಯರನ್ನು ಭೇಟಿಯಾದೆ.

ಪದ್ಮವಿಭೂಷಣ, ಯತಿಕುಲ ಚಕ್ರವರ್ತಿ ಶ್ರೀ ವಿಶ್ವೇಶ ತೀರ್ಥ ಸ್ವಾಮಿಯವರ ಜನ್ಮ ಶತಮಾನೋತ್ಸವ ಆಚರಣೆಗಳ ಲೋಗೋ ಅನಾವರಣಗೊಳಿಸಿದೆ. ಭಕ್ತಿ, ಪಾಂಡಿತ್ಯ ಮತ್ತು ಸೇವೆಯಿಂದ ಕೂಡಿದ ಅವರ ಜೀವನವು ಅಸಂಖ್ಯಾತ ಜನರಿಗೆ ಸದಾ ಸ್ಫೂರ್ತಿ ನೀಡಲಿದೆ. ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳು ಅವರ ಉದಾತ್ತ ಆದರ್ಶಗಳನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯಲಿವೆ."

 

*****


(ಪ್ರಕಟಣೆ ಐ.ಡಿ.: 2313703) ವಿಸಿಟರ್ ಕೌಂಟರ್ : 3
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , Assamese , Gujarati , Tamil