ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಷ್ಟ್ರಕವಿ ರಾಮಧಾರಿ ಸಿಂಗ್ ದಿನಕರ್ ಜಿ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 23 SEP 2026 11:31AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಕವಿ ರಾಮಧಾರಿ ಸಿಂಗ್ ದಿನಕರ್ ಜಿ ಅವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದರು.

ಸಾರ್ವಜನಿಕ ಪ್ರಜ್ಞೆ ಮತ್ತು ರಾಷ್ಟ್ರೀಯ ಹೆಮ್ಮೆಯ ಭಾವನೆಗಳಿಂದ ಕೂಡಿದ ಅವರ ಪ್ರಭಾವಶಾಲಿ ಕವಿತೆಗಳು ಇಂದಿಗೂ ದೇಶವಾಸಿಗಳ ಹೃದಯದಲ್ಲಿ ಶೌರ್ಯ, ತೇಜಸ್ಸು ಮತ್ತು ಸ್ವಾಭಿಮಾನವನ್ನು ತುಂಬುತ್ತಲೇ ಇವೆ ಎಂದು ಪ್ರಧಾನ ಮಂತ್ರಿಗಳು ಹೇಳಿದರು. ಅವರ ಸಾಹಿತ್ಯ ರಚನೆಗಳು ಸಾಹಿತ್ಯವನ್ನು ಶ್ರೀಮಂತಗೊಳಿಸುವುದಲ್ಲದೆ, ಮಾತೃಭೂಮಿಯ ಮೇಲಿನ ಭಕ್ತಿಗೆ ಸ್ಫೂರ್ತಿಯನ್ನು ತುಂಬುತ್ತವೆ ಎಂದು ಅವರು ಉಲ್ಲೇಖಿಸಿದರು. ಅವರ ಮಹಾನ್ ವ್ಯಕ್ತಿತ್ವ ಮತ್ತು ಸಾರ್ವಕಾಲಿಕ ಕೃತಿಗಳು ಮುಂದಿನ ಪೀಳಿಗೆಯ ಭಾರತೀಯರಿಗೆ ದೀರ್ಘಕಾಲದವರೆಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಪ್ರಧಾನಮಂತ್ರಿ ತಮ್ಮ X ಪೋಸ್ಟ್‌ನಲ್ಲಿ ಹೀಗೆ ಬರೆದಿದ್ದಾರೆ:

"राष्ट्रकवि रामधारी सिंह दिनकर जी की जयंती पर उन्हें मेरा शत-शत नमन। जनचेतना और राष्ट्रीय स्वाभिमान के भावों से भरी उनकी ओजस्वी कविताएं आज भी देशवासियों के हृदय में शौर्य, तेज और आत्मगौरव का संचार करती हैं। उनकी रचनाएं साहित्य को समृद्ध करने के साथ-साथ मातृभूमि के प्रति समर्पण को भी प्रेरित करती हैं। उनका विराट व्यक्तित्व और कालजयी कृतित्व युगों-युगों तक भारतवासियों का मार्गदर्शन करता रहेगा।"

 

*****


(ಪ್ರಕಟಣೆ ಐ.ಡಿ.: 2313815) ವಿಸಿಟರ್ ಕೌಂಟರ್ : 15
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Telugu , Malayalam