ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಪ್ರಧಾನಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
24 SEP 2026 7:13PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದಿರುವ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಅಭಿನಂದಿಸಿದ್ದಾರೆ.
ಈ ಪದಕದ ಗೆಲುವು ಅವರ ಒಲವು ಮತ್ತು ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸಿದೆ ಎಂದು ಹೇಳಿರುವ ಪ್ರಧಾನಮಂತ್ರಿ ಅವರು ಸ್ಪರ್ಧೆಯುದ್ದಕ್ಕೂ ಇಡೀ ತಂಡ ಅತ್ಯುತ್ಸಾಹ ಪ್ರದರ್ಶಿಸಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದಿನ ಸ್ಪರ್ಧೆಗಳಿಗೆ ಶ್ರೀ ಮೋದಿ ಅವರು ಶುಭ ಹಾರೈಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
“ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದಿರುವ ನಮ್ಮ ಪುರುಷರ ಬ್ಯಾಡ್ಮಿಂಟನ್ ತಂಡಕ್ಕೆ ಅಭಿನಂದನೆಗಳು!
ಈ ಪದಕವು ಅವರ ಒಲವು ಮತ್ತು ಕಠಿಣ ಪರಿಶ್ರಮದ ಪ್ರತೀಕವಾಗಿದೆ. ಇಡೀ ತಂಡವು ಸ್ಪರ್ಧೆಯುದ್ದಕ್ಕೂ ಅತ್ಯುತ್ತಮ ಚೈತನ್ಯ ಪ್ರದರ್ಶಿಸಿತು.
ಭವಿಷ್ಯದ ಸ್ಪರ್ಧೆಗಳಿಗೆ ಅವರಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi”
*****
(ಪ್ರಕಟಣೆ ಐ.ಡಿ.: 2314799)
ವಿಸಿಟರ್ ಕೌಂಟರ್ : 12
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam