ಪ್ರಧಾನ ಮಂತ್ರಿಯವರ ಕಛೇರಿ
ಸ್ಕೀಟ್ ಮಿಶ್ರ ತಂಡದ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿರುವ ಪರಿನಾಝ್ ಧಲಿವಾಲ್ ಮತ್ತು ಅನಂತ್ ಜೀತ್ ಸಿಂಗ್ ನರೂಕಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
24 SEP 2026 7:11PM by PIB Bengaluru
ಏಷ್ಯನ್ ಗೇಮ್ಸ್ ನ ಸ್ಕೀಟ್ ಮಿಶ್ರ ತಂಡದ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿರುವ ಪರಿನಾಝ್ ಧಲಿವಾಲ್ ಮತ್ತು ಅನಂತ್ ಜೀತ್ ಸಿಂಗ್ ನರೂಕಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.
ಏಷ್ಯನ್ ಕ್ರೀಡಾಕೂಟದ ಈ ಸ್ಪರ್ಧೆಯಲ್ಲಿ ಭಾರತಕ್ಕೆ ಲಭಿಸಿರುವ ಮೊಟ್ಟಮೊದಲ ಪದಕ ಇದಾಗಿದೆ ಎಂದು ನುಡಿಯುತ್ತಾ ಪ್ರಧಾನಮಂತ್ರಿಯವರು, ಈ ಯಶಸ್ಸು ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಮೈಲಿಗಲ್ಲುಗಳನ್ನು ಸಾಧಿಸಲು ಸ್ಫೂರ್ತಿಯಾಗಲಿದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಇಬ್ಬರಿಗೂ ಶುಭ ಹಾರೈಸಿದ್ದಾರೆ.
ಪ್ರಧಾನಮಂತ್ರಿಯವರ ಕಾರ್ಯಾಲಯದ 'ಎಕ್ಸ್' ಪೋಸ್ಟ್ ನಲ್ಲಿ ಹೀಗಿದೆ:
"ಏಷ್ಯನ್ ಕ್ರೀಡಾಕೂಟದ 'ಸ್ಕೀಟ್ ಮಿಶ್ರ ತಂಡ' ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿರುವ ಪರಿನಾಝ್ ಧಲಿವಾಲ್ ಮತ್ತು ಅನಂತ್ ಜೀತ್ ಸಿಂಗ್ ನರೂಕಾ ಅವರಿಗೆ ಅಭಿನಂದನೆಗಳು. ಏಷ್ಯನ್ ಕ್ರೀಡಾಕೂಟದ ಈ ವಿಭಾಗದಲ್ಲಿ ಭಾರತಕ್ಕೆ ಲಭಿಸಿರುವ ಮೊದಲ ಪದಕ ಇದಾಗಿದೆ. ಇವರಿಬ್ಬರಿಗೂ ಶುಭ ಹಾರೈಕೆಗಳು! ಈ ಯಶಸ್ಸು ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಮೈಲಿಗಲ್ಲುಗಳನ್ನು ಸಾಧಿಸಲು ಸ್ಫೂರ್ತಿಯಾಗಲಿ: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2314800)
ವಿಸಿಟರ್ ಕೌಂಟರ್ : 21
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Telugu
,
Malayalam