ಪ್ರಧಾನ ಮಂತ್ರಿಯವರ ಕಛೇರಿ
ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್ಸ್ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ನೀರಜ್ ಕುಮಾರ್ ಮತ್ತು ರುದ್ರಂಕ್ಷ್ ಪಾಟೀಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
25 SEP 2026 11:59PM by PIB Bengaluru
ಏಷ್ಯನ್ ಗೇಮ್ಸ್ ನ ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್ಸ್ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ನೀರಜ್ ಕುಮಾರ್ ಮತ್ತು ರುದ್ರಾಂಕ್ಷ್ ಪಾಟೀಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಅವರ ಗಮನ, ನಿಖರತೆ ಮತ್ತು ಸಂಯಮವು ರಾಷ್ಟ್ರವನ್ನು ಹೆಮ್ಮೆ ಪಡುವಂತೆ ಮಾಡಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಅವರ ಮುಂಬರುವ ಪ್ರಯತ್ನಗಳಿಗೆ ಶ್ರೀ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಭ ಹಾರೈಸಿದರು.
ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿ ಕಾರ್ಯಾಲಯವು ಈ ರೀತಿ ಹಂಚಿಕೊಂಡಿದೆ:
"ಏಷ್ಯನ್ ಗೇಮ್ಸ್ ನಲ್ಲಿ ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್ಸ್ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ನೀರಜ್ ಕುಮಾರ್ ಮತ್ತು ರುದ್ರಾಂಕ್ಷ್ ಪಾಟೀಲ್ ಅವರಿಗೆ ಅಭಿನಂದನೆಗಳು. ಅವರ ಗಮನ, ನಿಖರತೆ ಮತ್ತು ಸಂಯಮವು ರಾಷ್ಟ್ರವನ್ನು ಹೆಮ್ಮೆ ಪಡುವಂತೆ ಮಾಡಿದೆ. ಅವರ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2315606)
ವಿಸಿಟರ್ ಕೌಂಟರ್ : 7