ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕಮಲ್ಜೀತ್ ಮತ್ತು ಸುರುಚಿ ಇಂದರ್ ಸಿಂಗ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
25 SEP 2026 11:59PM by PIB Bengaluru
ಏಷ್ಯನ್ ಗೇಮ್ಸ್ ನ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಚಿನ್ನ ಗೆದ್ದು ಹೊಸ ಏಷ್ಯನ್ ದಾಖಲೆ ಗೆದ್ದ ಕಮಲ್ ಜೀತ್ ಮತ್ತು ಸುರುಚಿ ಇಂದರ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಅವರ ದೃಢನಿಶ್ಚಯವು ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಮುಂದಿನ ಪ್ರಯಾಣಕ್ಕಾಗಿ ಶ್ರೀ ನರೇಂದ್ರ ಮೋದಿ ಅವರು ಅವರಿಗೆ ಶುಭ ಹಾರೈಸಿದರು.
ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿ ಕಾರ್ಯಾಲಯವು ಈ ರೀತಿ ಹಂಚಿಕೊಂಡಿದೆ:
"ಹೊಸ ಏಷ್ಯನ್ ದಾಖಲೆಯೊಂದಿಗೆ ಅತ್ಯುತ್ತಮ ಪ್ರದರ್ಶನ!
ಏಷ್ಯನ್ ಗೇಮ್ಸ್ ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಕಮಲ್ಜೀತ್ ಮತ್ತು ಸುರುಚಿ ಇಂದರ್ ಸಿಂಗ್ ಅವರಿಗೆ ಅಭಿನಂದನೆಗಳು. ಅವರ ದೃಢನಿಶ್ಚಯವು ರಾಷ್ಟ್ರಕ್ಕೆ ಅಪಾರ ಹೆಮ್ಮೆಯನ್ನು ತಂದಿದೆ. ಮುಂದಿನ ಪ್ರಯಾಣಕ್ಕೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2315607)
ವಿಸಿಟರ್ ಕೌಂಟರ್ : 9