ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಕ್ರೀಡಾಕೂಟದ ಪುರುಷರ ಡೆಕಥ್ಲಾನ್‌ನಲ್ಲಿ ಕಂಚಿನ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
27 SEP 2026 9:26PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಏಷ್ಯನ್ ಕ್ರೀಡಾಕೂಟದಲ್ಲಿ ಪುರುಷರ ಡೆಕಥ್ಲಾನ್‌ನಲ್ಲಿ ಕಂಚಿನ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರನ್ನು ಅಭಿನಂದಿಸಿದ್ದಾರೆ.
ಎರಡು ದಿನಗಳ ಕಾಲ ನಡೆಯುವ ಸ್ಪರ್ಧೆಗಳನ್ನು ಎದುರಿಸಲು ಅಸಾಧಾರಣ ಬಹುಮುಖ ಪ್ರತಿಭೆ, ಸಂಯಮ ಮತ್ತು ದೃಢಸಂಕಲ್ಪದ ಅಗತ್ಯವಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಅವರು ಈ ಮೂರನ್ನೂ ಪ್ರದರ್ಶಿಸಿದ್ದಾರೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿದರು, ತಮ್ಮ ಅಭಿಯಾನವನ್ನು ಸದೃಢವಾಗಿ ಪೂರ್ಣಗೊಳಿಸಿದ್ದಾರೆ ಮತ್ತು ಇದೊಂದು ಶ್ಲಾಘನೀಯ ಸಾಧನೆ ಎಂದು ಬಣ್ಣಿಸಿದ್ದಾರೆ. ಭವಿಷ್ಯದ ಪ್ರಯತ್ನಗಳಿಗೆ ಪ್ರಧಾನಮಂತ್ರಿ ತಮ್ಮ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ;
"ಏಷ್ಯನ್ ಕ್ರೀಡಾಕೂಟದ ಪುರುಷರ ಡೆಕಥ್ಲಾನ್‌ನಲ್ಲಿ ಕಂಚಿನ ಪದಕ ಗೆದ್ದ ತೇಜಸ್ವಿನ್ ಶಂಕರ್ ಅವರಿಗೆ ಅಭಿನಂದನೆಗಳು! ಎರಡು ದಿನಗಳ ಕಾಲ ನಡೆಯುವ ಸ್ಪರ್ಧೆಗಳನ್ನು ಎದುರಿಸಲು ಅಸಾಧಾರಣ ಬಹುಮುಖ ಪ್ರತಿಣೆ, ಸಂಯಮ ಮತ್ತು ದೃಢಸಂಕಲ್ಪದ ಅಗತ್ಯವಿದೆ. ಅವರು ಈ ಮೂರನ್ನೂ ಪ್ರದರ್ಶಿಸಿದರು, ತಮ್ಮ ಅಭಿಯಾನವನ್ನು ಸದೃಢವಾಗಿ ಪೂರ್ಣಗೊಳಿಸಿದ್ದಾರೆ. ಶ್ಲಾಘನೀಯ ಸಾಧನೆ. ಭವಿಷ್ಯದ ಪ್ರಯತ್ನಗಳಿಗೆ ಶುಭಾಶಯಗಳು: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2315852)
ವಿಸಿಟರ್ ಕೌಂಟರ್ : 15
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam