ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳಾ ಸಿಂಗಲ್ಸ್ ಸ್ಕ್ವಾಷ್‌ನಲ್ಲಿ ಬೆಳ್ಳಿ ಪದಕ ಗೆದ್ದ ಅನಾಹತ್ ಸಿಂಗ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 27 SEP 2026 8:27PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳಾ ಸಿಂಗಲ್ಸ್ ಸ್ಕ್ವಾಷ್‌ನಲ್ಲಿ ಅದ್ಭುತ ಬೆಳ್ಳಿ ಪದಕ ಗೆದ್ದ ಅನಾಹತ್ ಸಿಂಗ್ ಅವರನ್ನು ಅಭಿನಂದಿಸಿದ್ದಾರೆ, ಅವರ ಸಾಧನೆ ಅದ್ಭುತವಾಗಿದೆ ಎಂದು ಬಣ್ಣಿಸಿದ್ದಾರೆ.

ಕೆಲವು ಅತ್ಯುತ್ತಮ ಆಟಗಾರ್ತಿಯರ ವಿರುದ್ಧ ಸ್ಪರ್ಧಿಸುವಾಗ ಅವರು ಅದ್ಭುತ ಕೌಶಲ್ಯವನ್ನುಪ್ರದರ್ಶಿಸಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದರು. ಅವರು ಹೊಸ ಎತ್ತರಕ್ಕೆ ಏರುವುದನ್ನು ಮುಂದುವರಿಸಲಿ ಮತ್ತು ಭಾರತಕ್ಕೆ ಇನ್ನೂ ಹಲವು ಪ್ರಶಸ್ತಿಗಳನ್ನು ತರಲಿ ಎಂದು ಶ್ರೀ ನರೇಂದ್ರ ಮೋದಿ ಹಾರೈಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯ ತನ್ನ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ;

"@Anahat_Singh13 ಅನಾಹತ್ ಸಿಂಗ್ ಗೆ ಅದ್ಭುತ ಬೆಳ್ಳಿ! ಏಷ್ಯನ್ ಕ್ರೀಡಾಕೂಟದ ಮಹಿಳಾ ಸಿಂಗಲ್ಸ್ ಸ್ಕ್ವಾಷ್‌ನಲ್ಲಿ ಅವರ ಸಾಧನೆ ಗಮನಾರ್ಹವಾಗಿದೆ. ಕೆಲವು ಅತ್ಯುತ್ತಮ ಆಟಗಾರ್ತಿಯರ ವಿರುದ್ಧ ಸ್ಪರ್ಧಿಸುವಾಗ ಅವರು ಅದ್ಭುತ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ. ಅವರು ಹೊಸ ಎತ್ತರಕ್ಕೆ  ಏರುವುದನ್ನು ಮುಂದುವರಿಸಲಿ ಮತ್ತು ಭಾರತಕ್ಕೆ ಇನ್ನೂ ಹಲವು ಪ್ರಶಸ್ತಿಗಳನ್ನು ತರಲಿ: ಪ್ರಧಾನಮಂತ್ರಿ @narendramodi"

 

*****


(ಪ್ರಕಟಣೆ ಐ.ಡಿ.: 2315875) ವಿಸಿಟರ್ ಕೌಂಟರ್ : 6
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Bengali , Manipuri , Punjabi , Gujarati , Tamil , Telugu , Malayalam