ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 5000 ಮೀಟರ್ ಓಟದಲ್ಲಿ ಕಂಚಿನ ಪದಕ ಗೆದ್ದ ಪಾರುಲ್ ಚೌಧರಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
28 SEP 2026 9:15PM by PIB Bengaluru
ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 5000 ಮೀಟರ್ ಓಟದಲ್ಲಿ ಕಂಚಿನ ಪದಕ ಗೆದ್ದ ಪಾರುಲ್ ಚೌಧರಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಅವರ ಯಶಸ್ಸು ಉದಯೋನ್ಮುಖ ಕ್ರೀಡಾಪಟುಗಳಿಗೆ ತುಂಬಾ ಸ್ಫೂರ್ತಿದಾಯಕವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಶ್ರೀ ಮೋದಿ ಅವರು ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು.
ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:
"ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 5000 ಮೀ ಓಟದಲ್ಲಿ ಕಂಚಿನ ಪದಕ ಗೆದ್ದ ಪಾರುಲ್ ಚೌಧರಿ ಅವರಿಗೆ ಅಭಿನಂದನೆಗಳು. ಅವರ ಯಶಸ್ಸು ಉದಯೋನ್ಮುಖ ಕ್ರೀಡಾಪಟುಗಳಿಗೆ ತುಂಬಾ ಸ್ಫೂರ್ತಿದಾಯಕವಾಗಿದೆ. ಮುಂದಿನ ಪ್ರಯತ್ನಗಳಿಗೆ ಅವರಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2316471)
ವಿಸಿಟರ್ ಕೌಂಟರ್ : 10
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Tamil
,
Telugu
,
Malayalam