ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 400 ಮೀಟರ್ ಹರ್ಡಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ವಿದ್ಯಾ ರಾಮರಾಜ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 28 SEP 2026 9:19PM by PIB Bengaluru

ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 400 ಮೀಟರ್ ಹರ್ಡಲ್ಸ್ ನಲ್ಲಿ ಕಂಚಿನ ಪದಕ ಗೆದ್ದ ವಿದ್ಯಾ ರಾಮರಾಜ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಇದು ನಿಜವಾಗಿಯೂ ಉತ್ತಮ ಓಟ ಎಂದು ಹೇಳಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಮುಂದಿನ ದಿನಗಳಲ್ಲಿ ಅವರು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ಹಾರೈಸಿದರು.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:

"ವಿದ್ಯಾ ರಾಮರಾಜ್ ಅವರ ಅದ್ಭುತ ಓಟ! ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 400 ಮೀಟರ್ ಹರ್ಡಲ್ಸ್ ನಲ್ಲಿ ಅವರು ಕಂಚಿನ ಪದಕ ಗೆದ್ದಿದ್ದಾರೆ. ವಿದ್ಯಾ ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಅವರು ಯಶಸ್ಸಿನ ಹೊಸ ಎತ್ತರವನ್ನು ಏರುತ್ತಲೇ ಇರಲಿ: ಪ್ರಧಾನಮಂತ್ರಿ @narendramodi"

 

*****


(ಪ್ರಕಟಣೆ ಐ.ಡಿ.: 2316478) ವಿಸಿಟರ್ ಕೌಂಟರ್ : 10
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Bengali , Manipuri , Punjabi , Gujarati , Tamil , Telugu , Malayalam