ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುಜರಾತ್‌ನ ಆನಂದ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿಉಂಟಾದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 30 SEP 2026 12:36PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಆನಂದ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ ಅವರು, ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯ ಈ ಬಗ್ಗೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ;

‘‘ಗುಜರಾತ್‌ನ ಆನಂದ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಮಂತ್ರಿ @narendramodi’’ 

 

*****


(ಪ್ರಕಟಣೆ ಐ.ಡಿ.: 2317148) ವಿಸಿಟರ್ ಕೌಂಟರ್ : 12
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Bengali , Assamese , Manipuri , Punjabi , Gujarati , Tamil , Telugu , Malayalam