ಪ್ರಧಾನ ಮಂತ್ರಿಯವರ ಕಛೇರಿ
ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂಭಾಷಣೆ
ಉಭಯ ನಾಯಕರಿಂದ ವ್ಯಾಪಾರ, ರಕ್ಷಣೆ, ಇಂಧನ ಮತ್ತು ನಿರ್ಣಾಯಕ ತಂತ್ರಜ್ಞಾನಗಳ ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಹಕಾರ ಪರಾಮರ್ಶೆ
ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುನ್ನಡೆಸುವ ಬದ್ಧತೆ ಎರಡೂ ದೇಶಗಳ ನಾಯಕರಿಂದ ಪುನರುಚ್ಚಾರ
ಜಾಗತಿಕ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸುವ ಪ್ರಯತ್ನಗಳು ಸೇರಿದಂತೆ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಕುರಿತು ನಾಯಕರಿಂದ ಅಭಿಪ್ರಾಯ ವಿನಿಮಯ
ಪ್ರಕಟಣಾ ದಿನಾಂಕ:
30 SEP 2026 7:20PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕ ಅಧ್ಯಕ್ಷರಾದ ಮಾನ್ಯ ಶ್ರೀ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.
ಉಭಯ ನಾಯಕರು ವ್ಯಾಪಾರ, ರಕ್ಷಣೆ, ಇಂಧನ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ಪರಸ್ಪರ ಆಸಕ್ತಿಯ ಇತರ ಕ್ಷೇತ್ರಗಳಲ್ಲಿನ ದ್ವಿಪಕ್ಷೀಯ ಸಹಕಾರದ ಪ್ರಗತಿ ಪರಾಮರ್ಶಿಸಿದರು.
ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುವ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು ಮತ್ತು ಉಭಯ ದೇಶಗಳ ಜನರ ಹಿತದೃಷ್ಟಿಯಿಂದ ಸಹಕಾರವನ್ನು ಬಲಪಡಿಸಲು ನಿಕಟವಾಗಿ ತೊಡಗಿಕೊಳ್ಳಲು ಸಮ್ಮತಿಸಿದರು.
ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಬೆಳವಣಿಗೆಗಳ ಕುರಿತು ಉಭಯರು ಅಭಿಪ್ರಾಯ ವಿನಿಮಯ ಮಾಡಿಕೊಂಡರು ಹಾಗೂ ಜಾಗತಿಕ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸಲು ನಡೆಯುತ್ತಿರುವ ಪ್ರಯತ್ನಗಳ ಬಗ್ಗೆ ಚರ್ಚಿಸಿದರು.
ಇಬ್ಬರೂ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಸಮ್ಮತಿಸಿದರು.
*****
(ಪ್ರಕಟಣೆ ಐ.ಡಿ.: 2317587)
ವಿಸಿಟರ್ ಕೌಂಟರ್ : 8
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam