ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 75 ಕೆಜಿ ಬಾಕ್ಸಿಂಗ್‌ ನಲ್ಲಿ ಚಿನ್ನ ಗೆದ್ದ ಲೊವ್ಲಿನಾ ಬೊರ್ಗೊಹೈನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ಏಷ್ಯನ್ ಕ್ರೀಡಾಕೂ

ಪ್ರಕಟಣಾ ದಿನಾಂಕ: 02 OCT 2026 6:05PM by PIB Bengaluru

ಏಷ್ಯನ್ ಕ್ರೀಡಾಕೂಟದಲ್ಲಿ ಮಹಿಳೆಯರ 75 ಕೆಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಫೈನಲ್‌ ನಲ್ಲಿ 5-0 ಅಂತರದಿಂದ ಭರ್ಜರಿ ಜಯ ಸಾಧಿಸಿ ಚಿನ್ನದ ಪದಕ ಗೆದ್ದ ಲೊವ್ಲಿನಾ ಬೊರ್ಗೊಹೈನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಲೊವ್ಲಿನಾ ಅವರ ಕ್ರೀಡಾ ಪ್ರಯಾಣವು ಗಮನಾರ್ಹ ದೃಢನಿಶ್ಚಯ ಮತ್ತು ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ.

ಲೊವ್ಲಿನಾ ಬೊರ್ಗೊಹೈನ್ ಅವರ ಮುಂಬರುವ ಪ್ರಯತ್ನಗಳಿಗೆ ಶ್ರೀ ಮೋದಿ ಅವರು ಶುಭ ಹಾರೈಸಿದ್ದಾರೆ.

ಪ್ರಧಾನಮಂತ್ರಿಯವರ ಕಾರ್ಯಾಲಯ ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ತಿಳಿಸಿದೆ;

 “@LovlinaBorgohai ಅವರಿಂದ ಅದ್ಭುತ ಪ್ರದರ್ಶನ!

ಏಷ್ಯನ್ ಕ್ರೀಡಾಕೂಟದ ಮಹಿಳೆಯರ 75 ಕೆಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಫೈನಲ್‌ ನಲ್ಲಿ 5-0 ಅಂತರದ ಭರ್ಜರಿ ಜಯದೊಂದಿಗೆ ಚಿನ್ನ ಗೆದ್ದ ಲವ್ಲಿನಾ ಅವರಿಗೆ ಅಭಿನಂದನೆಗಳು. ಅವರ ಕ್ರೀಡಾ ಪ್ರಯಾಣವು ಗಮನಾರ್ಹ ದೃಢನಿಶ್ಚಯ ಮತ್ತು ಶ್ರೇಷ್ಠತೆಯನ್ನು ಪ್ರತಿಬಿಂಬಿಸುತ್ತದೆ. ಅವರ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi ”

 

*****


(ಪ್ರಕಟಣೆ ಐ.ಡಿ.: 2318990) ವಿಸಿಟರ್ ಕೌಂಟರ್ : 20
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Manipuri , Bengali , Punjabi , Gujarati , Tamil , Telugu , Malayalam