ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಎಲ್‌.ಕೆ. ಅಡ್ವಾಣಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 07 OCT 2026 9:20PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಉಪ ಪ್ರಧಾನಮಂತ್ರಿ ಶ್ರೀ ಎಲ್‌.ಕೆ. ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಕೋರಿದರು. ಶ್ರೀ ಅಡ್ವಾಣಿ ಅವರ ದಶಕಗಳ ಸಾರ್ವಜನಿಕ ಸೇವೆ ಮತ್ತು ರಾಷ್ಟ್ರೀಯ ಜೀವನಕ್ಕೆ ಅವರು ನೀಡಿದ ಮಹತ್ವದ ಕೊಡುಗೆಯನ್ನು ಶ್ಲಾಸಿದ ಶ್ರೀ ನರೇಂದ್ರ ಮೋದಿ ಅವರು, ಅವರ ಕೊಡುಗೆಗಳು ದೇಶದ ಪ್ರಗತಿಯ ಮೇಲೆ ಶಾಶ್ವತವಾದ ಛಾಪು ಮೂಡಿಸಿವೆ ಎಂದು ಹೇಳಿದರು.

ಪ್ರಧಾನಮಂತ್ರಿಯವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ:

ಅಡ್ವಾಣಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಕೋರಿದೆ.

ದಶಕಗಳ ಸಾರ್ವಜನಿಕ ಸೇವೆ ಮತ್ತು ನಮ್ಮ ರಾಷ್ಟ್ರೀಯ ಜೀವನಕ್ಕೆ ಅವರ ಕೊಡುಗೆ ಶಾಶ್ವತ ಛಾಪು ಮೂಡಿಸಿದೆ.

ಅವರು ಭಾರತದ ಪ್ರಗತಿಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

 

*****


(ಪ್ರಕಟಣೆ ಐ.ಡಿ.: 2320587) ವಿಸಿಟರ್ ಕೌಂಟರ್ : 5
ಪ್ರಕಟಣೆಯನ್ನು ಇದರಲ್ಲಿ ಓದಿ: English , हिन्दी , Assamese , Gujarati , Telugu , Malayalam