ಪ್ರಧಾನ ಮಂತ್ರಿಯವರ ಕಛೇರಿ
ಸರ್ಕಾರದ ಮುಖ್ಯಸ್ಥರಾಗಿ 25 ವರ್ಷಗಳ ಸೇವೆ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಶುಭಾಶಯ ಕೋರಿದ ಜಾಂಬಿಯಾ ಅಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
08 OCT 2026 7:14PM by PIB Bengaluru
ಸರ್ಕಾರದ ಮುಖ್ಯಸ್ಥರಾಗಿ ದೇಶದ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಶುಭಾಶಯ ಕೋರಿದ ಜಾಂಬಿಯಾ ಗಣರಾಜ್ಯದ ಅಧ್ಯಕ್ಷರಾದ ಹಕೈಂದೆ ಹಿಚಿಲೆಮಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
ಜಾಂಬಿಯಾದೊಂದಿಗಿನ ಸ್ನೇಹ ಸಂಬಂಧವನ್ನು ಭಾರತ ಅತ್ಯಂತ ಮಹತ್ವದ್ದಾಗಿ ಪರಿಗಣಿಸುತ್ತದೆ. ಉಭಯ ದೇಶಗಳ ನಡುವಿನ ನಿಕಟ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸಲು ಎದುರು ನೋಡುತ್ತಿರುವುದಾಗಿ ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ತಮ್ಮ ‘ಎಕ್ಸ್’ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಅಧ್ಯಕ್ಷರಾದ ಹಿಚಿಲೆಮಾ ಅವರೇ, ನಿಮ್ಮ ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು.
ಜಾಂಬಿಯಾದೊಂದಿಗಿನ ಸ್ನೇಹವನ್ನು ಭಾರತ ಅತ್ಯಂತ ಮಹತ್ವದ್ದಾಗಿ ಪರಿಗಣಿಸುತ್ತದೆ. ನಮ್ಮ ನಿಕಟ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸಲು ನಾನು ಎದುರು ನೋಡುತ್ತಿದ್ದೇನೆ.
@HHichilema”
*****
(ಪ್ರಕಟಣೆ ಐ.ಡಿ.: 2321118)
ವಿಸಿಟರ್ ಕೌಂಟರ್ : 12
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Telugu
,
Malayalam