ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷಗಳ ಸೇವೆ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಶುಭ ಹಾರೈಸಿದ ಕಜಕಿಸ್ತಾನ ಅಧ್ಯಕ್ಷರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 08 OCT 2026 7:11PM by PIB Bengaluru

ಸರ್ಕಾರದ ಮುಖ್ಯಸ್ಥರಾಗಿ ದೇಶಕ್ಕೆ 25 ವರ್ಷಗಳ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ ಶುಭ ಹಾರೈಸಿದ ಕಜಕಿಸ್ತಾನ ಗಣರಾಜ್ಯದ ಅಧ್ಯಕ್ಷ ಕಾಸಿಂ-ಜೊಮಾರ್ಟ್ ಟೋಕಯೆವ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಕಜಕಿಸ್ತಾನದೊಂದಿಗಿನ ನಿಕಟ ಸ್ನೇಹ ಹಾಗೂ ಕಾರ್ಯತಂತ್ರದ ಪಾಲುದಾರಿಕೆಗೆ ತಾವು ಹೆಚ್ಚಿನ ಮಹತ್ವ ನೀಡುವುದಾಗಿ ಪ್ರಧಾನಮಂತ್ರಿ ಹೇಳಿದ್ದಾರೆ. ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿ, ಆಳಗೊಳಿಸಲು ಒಟ್ಟಾಗಿ ಕಾರ್ಯನಿರ್ವಹಿಸಲು ಎದುರು ನೋಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.

ಶ್ರೀ ಮೋದಿ ಅವರು ‘ಎಕ್ಸ್‌’ ಪೋಸ್ಟ್ ನಲ್ಲಿ ಹೀಗೆ ಬರೆದುಕೊಂಡಿದ್ದಾರೆ:

“ಅಧ್ಯಕ್ಷರಾದ ಕಾಸಿಂ-ಜೊಮಾರ್ಟ್ ಟೋಕಯೆವ್ ಅವರೇ, ನಿಮ್ಮ ಆತ್ಮೀಯ ಶುಭಾಶಯಗಳಿಗೆ ಧನ್ಯವಾದಗಳು.

ಕಜಕಿಸ್ತಾನದೊಂದಿಗಿನ ನಮ್ಮ ನಿಕಟ ಸ್ನೇಹ ಹಾಗೂ ಕಾರ್ಯತಂತ್ರದ ಪಾಲುದಾರಿಕೆಗೆ ನಾನು ಹೆಚ್ಚಿನ ಮಹತ್ವ ನೀಡುತ್ತೇನೆ. ನಮ್ಮ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿ, ಆಳಗೊಳಿಸಲು ಒಟ್ಟಾಗಿ ಕಾರ್ಯನಿರ್ವಹಿಸಲು ಎದುರು ನೋಡುತ್ತಿದ್ದೇನೆ.

@TokayevKZ”

 

*****


(ಪ್ರಕಟಣೆ ಐ.ಡಿ.: 2321119) ವಿಸಿಟರ್ ಕೌಂಟರ್ : 2
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Assamese , Gujarati , Telugu