ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬಿಹಾರದ ವೈಶಾಲಿಯಲ್ಲಿ ನಡೆದ ದೋಣಿ ದುರಂತದಲ್ಲಿ ಸಂಭವಿಸಿದ ಪ್ರಾಣಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 13 OCT 2026 11:57PM by PIB Bengaluru

ಬಿಹಾರದ ವೈಶಾಲಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಮಂತ್ರಿಯವರು ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ಪ್ರಧಾನಮಂತ್ರಿಯವರು ತಮ್ಮ ಸಂತಾಪವನ್ನು ತಿಳಿಸಿದ್ದು, ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪ್ರಾಣ ಕಳೆದುಕೊಂಡವರ ಸನಿಹದ ಸಂಬಂಧಿಕರಿಗೆ 2 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಹಾಗೂ ಗಾಯಾಳುಗಳಿಗೆ 50,000 ರೂಪಾಯಿಗಳ ಪರಿಹಾರವನ್ನುನೀಡಲಾಗುವುದು ಎಂದು ಪ್ರಧಾನಮಂತ್ರಿಯವರು ಘೋಷಿಸಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ಸಂದೇಶದಲ್ಲಿ ಈ ರೀತಿ ತಿಳಿಸಿದೆ;

"ಬಿಹಾರದ ವೈಶಾಲಿಯಲ್ಲಿ ನಡೆದ ದೋಣಿ ದುರಂತದಲ್ಲಿ ಸಂಭವಿಸಿದ ಜೀವಹಾನಿ ತೀವ್ರ ನೋವುಂಟು ಮಾಡಿದೆ. ಈ ಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.

ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರವಾಗಿ ಪ್ರತಿಯೊಬ್ಬ ಮೃತರ ಸನಿಹದ ಸಂಬಂಧಿಕರಿಗೆ ರೂ. 2 ಲಕ್ಷ ಹಾಗೂ ಗಾಯಾಳುಗಳಿಗೆ ರೂ. 50,000 ನೀಡಲಾಗುವುದು: ಪ್ರಧಾನಮಂತ್ರಿ @narendramodi"

 

*****


(ಪ್ರಕಟಣೆ ಐ.ಡಿ.: 2323187) ವಿಸಿಟರ್ ಕೌಂಟರ್ : 5
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Manipuri , Bengali , Assamese , Punjabi , Gujarati , Odia , Telugu , Malayalam