ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

2026ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಅಕ್ಟೋಬರ್ 15 ರಂದು ಸಂವಾದ ನಡೆಸಲಿರುವ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 14 OCT 2026 3:13PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಅಕ್ಟೋಬರ್ 15 ರಂದು ಸಂಜೆ 4:30ರ ಸುಮಾರಿಗೆ ನವದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ 2026ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತೀಯ ತಂಡದೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಕ್ರೀಟಾಪಟುಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಇತ್ತೀಚೆಗೆ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತವು 21 ಚಿನ್ನ, 27 ಬೆಳ್ಳಿ ಮತ್ತು 37 ಕಂಚು ಸೇರಿದಂತೆ 85 ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿತು. ಇದು ವಿವಿಧ ಕ್ರೀಡಾ ವಿಭಾಗಗಳಲ್ಲಿ ದೇಶದ ಬೆಳೆಯುತ್ತಿರುವ ಸ್ಪರ್ಧಾತ್ಮಕತೆಯನ್ನು ಪ್ರತಿಬಿಂಬಿಸುವ ಮೂಲಕ ಏಷ್ಯನ್ ಕ್ರೀಡಾಕೂಟದಲ್ಲಿ ಅಗ್ರ ಐದು ರಾಷ್ಟ್ರಗಳಲ್ಲಿ ಭಾರತವು ಸತತ ಎರಡನೇ ಸ್ಥಾನ ಗಳಿಸಿದೆ.

ಭಾರತವು ಕ್ರೀಡಾಕೂಟದಲ್ಲಿ ಹಲವು ಗಮನಾರ್ಹ ಸಾಧನೆಗಳನ್ನು ದಾಖಲಿಸಿದೆ, ಅದರಲ್ಲಿ ರಿಕರ್ವ್ ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಪ್ರದರ್ಶನಗಳು, ಒಂದೇ ಆವೃತ್ತಿಯಲ್ಲಿ ಪುರುಷ ಮತ್ತು ಮಹಿಳಾ ಹಾಕಿ ತಂಡಗಳಿಗೆ ಚಿನ್ನದ ಪದಕಗಳು ಮತ್ತು ಸಾಫ್ಟ್ ಟೆನಿಸ್ ಮತ್ತು ಮಿಶ್ರ ಸಮರ ಕಲೆಗಳಲ್ಲಿ (ಎಂಎಂಎ) ಮೊದಲ ಪದಕಗಳನ್ನು ಜಯಿಸಿರುವುದು ಸೇರಿವೆ. ಮಹಿಳೆಯರ ಟ್ರ್ಯಾಪ್ ಸ್ಪರ್ಧೆಯಲ್ಲಿ ಭಾರತ ಮೊದಲ ಬಾರಿಗೆ ಚಿನ್ನದ ಪದಕ ಗಳಿಸಿದ್ದು, 28 ವರ್ಷಗಳ ನಂತರ ಏಷ್ಯನ್ ಕ್ರೀಡಾಕೂಟದಲ್ಲಿ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಮತ್ತು ಗ್ರೀಕೋ-ರೋಮನ್ ಕುಸ್ತಿಯಲ್ಲಿ ಬೆಳ್ಳಿ ಪದಕ ಗಳಿಸಿದ್ದು, ಈ ವಿಭಾಗದಲ್ಲಿ ಭಾರತೀಯ ಆಟಗಾರರೊಬ್ಬರು ಫೈನಲ್ ಗೇರಲು 64 ವರ್ಷಗಳ ಕಾಯುವಿಕೆ ಕೊನೆಗೊಳಿಸಿತು.

ಈ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ತಂಡದ ಕ್ರೀಡಾಪಟುಗಳು, ಅವರ ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಅಧಿಕಾರಿಗಳು, ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

 

*****


(ಪ್ರಕಟಣೆ ಐ.ಡಿ.: 2323236) ವಿಸಿಟರ್ ಕೌಂಟರ್ : 16
ಪ್ರಕಟಣೆಯನ್ನು ಇದರಲ್ಲಿ ಓದಿ: Bengali , Bengali-TR , Malayalam , Assamese , English , Urdu , Marathi , हिन्दी , Punjabi , Gujarati , Tamil , Telugu