ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೋಲ್ಕತ್ತಾದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ


ಪ್ರಧಾನಮಂತ್ರಿ ಅವರು ಪರಿಹಾರ ಘೋಷಿಸಿದರು

ಪ್ರಕಟಣಾ ದಿನಾಂಕ: 17 OCT 2026 11:27PM by PIB Bengaluru

ಕೋಲ್ಕತ್ತಾದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಘಟನೆ ದುಃಖಕರವಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮೃತರ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು. ಪಶ್ಚಿಮ ಬಂಗಾಳ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ ಎಂದು ಅವರು ಹೇಳಿದರು.

ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬ ವ್ಯಕ್ತಿಯ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.)  2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಅನುಕಂಪದ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿಯವರು ಘೋಷಿಸಿದರು.

ಪ್ರಧಾನಮಂತ್ರಿ ಅವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೆ ಮಾಡಿದೆ;

"ಕೋಲ್ಕತ್ತಾದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣವು ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ: ಪ್ರಧಾನಮಂತ್ರಿ @narendramodi "

"ಪ್ರಾಣ ಕಳೆದುಕೊಂಡವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.)  2 ಲಕ್ಷ ರೂ. ಅನುಕಂಪದ ಪರಿಹಾರವನ್ನು ಪ್ರಧಾನಮಂತ್ರಿ ಅವರು ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು."

 

ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ತಾಣದಲ್ಲಿ ಈ ರೀತಿ ಬರೆದಿದ್ದಾರೆ;

"ಕೋಲ್ಕತ್ತಾದಲ್ಲಿ ಸಂಭವಿಸಿದ ಕಾಲ್ತುಳಿತವು ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.

ಪಶ್ಚಿಮ ಬಂಗಾಳ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ."

**************


(ಪ್ರಕಟಣೆ ಐ.ಡಿ.: 2324887) ವಿಸಿಟರ್ ಕೌಂಟರ್ : 10
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , Marathi , हिन्दी , Assamese , Bengali , Gujarati , Tamil , Malayalam